ನಗರದಲ್ಲಿ ನಿಷೇಧಾಜ್ಞೆ ಜಾರಿ; ಫ್ಲೈ ಓವರ್ ಮೇಲೆ ವಾಹನ ಸಂಚಾರ ನಿಷೇಧ

2020 ಡಿ31 ಮಧ್ಯಾಹ್ನ 12 ಗಂಟೆಯಿಂದ 2021 ಜ1 ಬೆಳಿಗ್ಗೆ 6 ರವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ತಿಳಿಸಿದ್ದರು. ಇದೀಗ ಸಂಚಾರ ನಿಯಮದಲ್ಲಿಯೂ ಕೆಲವೊಂದು ಕಟ್ಟುನಿಟ್ಟಿನ ನಿರ್ಬಂಧ ಹೇರಿದ್ದು, ನಗರದ ಫ್ಲೈ ಓವರ್‌ಗಳನ್ನು ಮುಚ್ಚುವುದಾಗಿ ಇಲಾಖೆ ತಿಳಿಸಿದೆ.
ನಗರದಲ್ಲಿ ನಿಷೇಧಾಜ್ಞೆ ಜಾರಿ; ಫ್ಲೈ ಓವರ್ ಮೇಲೆ ವಾಹನ ಸಂಚಾರ ನಿಷೇಧ

ಕೋವಿಡ್-19 ಹಾಗೂ ರೂಪಾಂತರಿ ಕರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ನಗರದಲ್ಲಿ ಸಾರ್ವಜನಿಕ ಹೊಸವರ್ಷಾಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಕೆಲವೆಡೆ ಸಂಚಾರ ನಿಷೇಧ ವಲಯಗಳನ್ನಾಗಿ ಮಾಡಲಾಗಿದೆ.

2020 ಡಿ31 ಮಧ್ಯಾಹ್ನ 12ಗಂಟೆ ಯಿಂದ 2021 ಜ1 ಬೆಳಿಗ್ಗೆ 6 ರವರೆಗೆ ಸೆಕ್ಷನ್ 144 ಜಾರಿ ಮಾಡುವುದಾಗಿ ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ತಿಳಿಸಿದ್ದರು. ಇದೀಗ ಸಂಚಾರ ನಿಯಮದಲ್ಲಿಯೂ ಕೆಲವೊಂದು ಕಟ್ಟುನಿಟ್ಟಿನ ನಿರ್ಬಂಧ ಹೇರಿದ್ದು, ನಗರದ ಫ್ಲೈ ಓವರ್‌ಗಳನ್ನು ಮುಚ್ಚುವುದಾಗಿ ಇಲಾಖೆ ತಿಳಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾ ನಗರದಲ್ಲಿ ಸಂಚಾರ ನಿಷೇಧ ವಲಯಗಳನ್ನಾಗಿ ಮಾಡಲಾಗಿದೆ. ಅನವಶ್ಯಕ ಸಂಚಾರ, ಬೈಕ್ ಸುತ್ತಾಟ, ವ್ಹಿಲಿಂಗ್ ಮಾಡುವಂತಿಲ್ಲ ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಒಂದು ವೇಳೆ ನಿಯಮಗಳನ್ನು ಮೀರಿದರೆ ದಂಡ ವಿಧಿಸುವುದರ ಜೊತೆಗೆ ಐಪಿಸಿ ಸೆಕ್ಷನ್ 188 ಹಾಗೂ ಎನ್ಡಿಎಮ್ಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ಹೊಸವರ್ಷಾಚರಣೆ ವೇಳೆ ಜಾರಿಗೆ ತಂದ ನಿಯಮಗಳನ್ನು ಪಾಲಿಸಬೇಕೆಂದು ಸಾರ್ವಜನಿಕರಲ್ಲಿ ವಿನಂತಿ ಮಾಡಿದೆ.

ಡಿ. 31ರ ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಮೈಕೋ ಲೇಔಟ್, ಏರ್ಪೋರ್ಟ್, ವೈಟ್ ಫೀಲ್ಡ್, ಹೆಚ್ಎಸ್ಆರ್ ಲೇಔಟ್, ಹಲಸೂರು, ಕೆ.ಆರ್.ಪುರ, ಪುಲಿಕೇಶಿನಗರ, ಬಾಣಸವಾಡಿ, ಆಡುಗೋಡಿ, ಮೈಸೂರು ರಸ್ತೆ, ಬಸವನಗುಡಿ, ಜಯನಗರ, ಮಲ್ಲೇಶ್ವರಂ, ಬನಶಂಕರಿ, ಕೆಂಗೇರಿ, ಯಶವಂತಪುರ, ಹೆಬ್ಬಾಳ, ಹಾಗೂ ಪೀಣ್ಯ ಪ್ರದೇಶಗಳಲ್ಲಿರುವ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಹೊಸ ವರ್ಷ ಸಂಭ್ರಮಾಚರಣೆ ನಿಷೇಧವಿದ್ದರೂ ಗುಂಪು ಸೇರುವುದು ಹಾಗೂ ಫ್ಲೈ ಓವರ್ ಮೇಲೆ ವೀಲಿಂಗ್ ಮತ್ತು ಡ್ರ್ಯಾಗ್ ರೇಸ್ ಮಾಡುವ ಸಾಧ್ಯತೆ ಹೆಚ್ಚಿರುವುದರಿಂದ ಡಿ. 31ರ ರಾತ್ರಿ 10 ರಿಂದ ಜ.1 ಬೆಳಗ್ಗೆ 6 ಗಂಟೆ ವರೆಗೆ ನಗರದ ಒಟ್ಟು 44 ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತದೆ.

ಪೊಲೀಸ್ ವಾಹನ ಹಾಗೂ ಕರ್ತವ್ಯ ನಿರತ ತುರ್ತು ವಾಹನಗಳನ್ನು ಹೊರತುಪಡಿಸಿ ಎಂಜಿ ರಸ್ತೆ, ಚರ್ಚ್ ರಸ್ತೆ ಮ್ಯುಸಿಯಮ್ ರಸ್ತೆ, ರೆಸ್ಟ್ ಹೌಸ್ ಪಾರ್ಕ್ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆ ಸೇರಿ ಟ್ರಿನಿಟಿ ರಸ್ತೆ, ಇನ್ಪ್ರೆಟ್ರಿ ರಸ್ತೆ , ಬ್ರಿಗೆಡ್ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಿ ಆದೇಶಿಸಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಕಮಲ್‌ ಪಂತ್, ಚಾಲ್ತಿಯಲ್ಲಿರುವ COVID-19 ಪರಿಸ್ಥಿತಿ ಮತ್ತು ರೂಪಾಂತರಗೊಂಡಿರುವ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದಿದ್ದಾರೆ.

ʼ

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com