ರಾಜ್ಯದ ರೈತರ ತೀವ್ರ ವಿರೋಧದ ನಡುವೆಯೂ ರಾಜ್ಯಪಾಲರು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಅಂಕಿತ ಹಾಕಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಬೃಹತ್ ರ್ಯಾಲಿ ನಡೆಸಿ ರಾಜ್ಯಪಾಲರನ್ನು ರೈತರ ನಿಯೋಗವು ಭೇಟಿಯಾಗಿತ್ತು. ಈ ಸಂದರ್ಭದಲ್ಲಿ ಕಾನೂನು ತಿದ್ದುಪಡಿಯ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದರು. ಆದರೆ ಈಗ ಎಲ್ಲಾ ಭರವಸೆಗಳು ಹುಸಿಯಾಗಿವೆ.
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ಸರ್ಕಾರವು 79ಎ, 79ಬಿ ಮತ್ತು 79ಸಿ ಸೆಕ್ಷನ್ಗಳನ್ನು ತೆಗೆದುಹಾಕಿದೆ. ಹಾಗೂ ಇದಕ್ಕೆ ರಾಜ್ಯಪಾಲರು ಅಧಿಕೃತ ಮುದ್ರೆಯನ್ನು ಒತ್ತಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ನೀಡಿ ಹಾಗೂ ರಾಜ್ಯದಲ್ಲಿ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ಐಕ್ಯ ಹೋರಾಟ ಸಮಿತಿಯು ಅನಿರ್ದಿಷ್ಟಾವಧಿ ಧರಣಿಯನ್ನು ಕೈಗೊಂಡಿತ್ತು. ರಾಜ್ಯಪಾಲರನ್ನು ಭೇಟಿಯಾದ ನಂತರ ತಾತ್ಕಾಲಿಕವಾಗಿ ಧರಣಿಯನ್ನು ಹಿಂಪಡೆಯಲಾಗಿತ್ತು.