ಗ್ರಾಮ ಪಂಚಾಯಿತಿ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಮೀಸಲಾತಿ ಪ್ರಮಾಣ ಬಿಡುಗಡೆ

ಆಯಾಯ ತಾಲೂಕಿನ ಜನಸಂಖ್ಯೆಯ ಆಧಾರದ ಮೇಲೆ ಈ ಮೀಸಲಾತಿಯನ್ನು ನಿಗದಿ ಪಡಿಸಲಾಗಿದೆ.
ಗ್ರಾಮ ಪಂಚಾಯಿತಿ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಮೀಸಲಾತಿ ಪ್ರಮಾಣ ಬಿಡುಗಡೆ

ರಾಜ್ಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಈಗ ಎಲ್ಲರ ಚಿತ್ತ ನೆಟ್ಟಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯೂ ಪ್ರಕಟವಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅತೀ ಹೆಚ್ಚು ಸ್ಥಾನಗಳನ್ನು ಗಿಟ್ಟಿಸಿಕೊಳ್ಳಲು ಶಕ್ತರಾದರೂ, ಮೀಸಲಾತಿಯ ಆಧಾರದಲ್ಲಿ ಯಾರಿಗೆ ಯಾವ ಪಂಚಾಯಿತಿ ಒಲಿಯುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ


ಸದ್ಯಕ್ಕೆ ಚುಣಾವಣಾ ಆಯೋಗವು ಆಯೋಗವು ರಾಜ್ಯದ 5,956 ಗ್ರಾಮ ಪಂಚಾಯ್ತಿಗಳಿಗೆ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ(ಅ), ಹಿಂದುಳಿದ ವರ್ಗ(ಬ) ಮತ್ತು ಸಾಮಾನ್ಯ ವರ್ಗಹಾಗೂ ಈ ಪ್ರವರ್ಗದ ಮಹಿಳೆಯರಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆಗಳನ್ನು, ನಿಗದಿ ಪಡಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದೆ.

ಆಯಾಯ ತಾಲೂಕಿನ ಜನಸಂಖ್ಯೆಯ ಆಧಾರದ ಮೇಲೆ ಈ ಮೀಸಲಾತಿಯನ್ನು ನಿಗದಿ ಪಡಿಸಲಾಗಿದೆ. ಮೊದಲ 30 ತಿಂಗಳ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ನಿಗಧಿ ಪಡಿಸಿ ಗೆಜೆಟ್ ನೋಟಿಫಿಕೇಷನ್ ನಲ್ಲಿ ಪ್ರಕಟಿಸಿದೆ.

Attachment
PDF
ಗ್ರಾಪಂ ಅಧ್ಯಕ್ಷ&ಉಪಾಧ್ಯಕ್ಷ ಸ್ಥಾನ ನಿಗದಿ.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com