ರಾಜ್ಯದಲ್ಲಿ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ ಹಾಗೂ ಕಲಿಕೆಗಾಗಿ ಗುರುತಿಸಿರುವ ವಿಷಯಾಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿದೆ. ಈ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುವುದು. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.