ಬೂತ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಂತೆ ಸಿದ್ದರಾಮಯ್ಯ ಸೂಚನೆ

ಕಾಂಗ್ರೆಸ್‌ ಪಕ್ಷ ಬಿಜೆಪಿಯ ಭ್ರಷ್ಟ ಆಡಳಿತವನ್ನು ಮತ್ತು ಕಾಂಗ್ರೆಸ್‌ ಜಾರಿಗೆ ತಂದ ಜನ ಪರ ಯೋಜನೆಗಳನ್ನು ಪ್ರತಿ ಮನೆಗೂ ತಿಳಿಸುವಂತೆ ಮಾಡಬೇಕು. ಇದರಿಂದ ಬೂತ್‌ ಮಟ್ಟದಲ್ಲಿ ಕಮಿಟಿಗಳನ್ನು ರಚಿಸಿ ಒಗ್ಗಟ್ಟಿನಿಂದ ಪಕ್ಷವನ್ನು ಸಂಘಟಿಸ ಬೇಕೆಂದು ಕಾಂಗ್ರೆಸ್‌ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.
ಬೂತ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಂತೆ ಸಿದ್ದರಾಮಯ್ಯ ಸೂಚನೆ

ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿತ್ತು. ಆದರೆ ಚುನಾವಣೆಯಲ್ಲಿ ಬಹುಮತ ಬಂದಿಲ್ಲ ಕಾರಣ ಗ್ರಾಮ ಮತ್ತು ಬೂತ್ ಮಟ್ಟದಲ್ಲಿ ನಮ್ಮ ಕಾರ್ಯಕರ್ತರು ಸರ್ಕಾರದ ಸಾಧನೆ ಮತ್ತು ಕಾರ್ಯವೈಖರಿ ಪ್ರಚಾರ ಮಾಡುವಲ್ಲಿ ಎಡವಿದ್ದಾರೆಂದು ಜ6 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷ ಸಂಘಟನೆಯ ವಿಚಾರ ಕುರಿತು ಪ್ರತಿಕ್ರಿಯಿಸಿದ್ದಾರೆ.

ಪಕ್ಷದ ಏಳಿಗೆಗೆ ಗ್ರಾಮಮಟ್ಟದಲ್ಲಿ ಹೆಚ್ಚು ಸಂಘಟನೆ ಆಗಬೇಕು. ಇದರಿಂದ ಈ ಬಾರಿ ಕೆಪಿಸಿಸಿಯ ಅಧ್ಯಕ್ಷರು ಸಂಘಟನೆ ಮತ್ತು ಸಂಘರ್ಷದ ವರ್ಷ ಎಂದು ಘೋಷಿಸಿದ್ದಾರೆ. ಪಕ್ಷದ ಸಂಘಟನಾ ಕಾರ್ಯನಿರಂತರವಾಗಿ ಮುಂದುವರೆಯ ಬೇಕು ಎಂದು ಮುಖಂಡರಿಗೆ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ


ಸಿಎಂ ಯಡಿಯೂರಪ್ಪ ಸರ್ಕಾರ ಕರೋನಾ ಲಾಕ್‌ಡೌನ್‌ ವೇಳೇ ಜನರ ನೆರವಿಗೆ ಬರುವುದು ಬಿಟ್ಟು ಭ್ರಷ್ಟಾಚಾರದಲ್ಲಿ ತೊಡಗಿತ್ತು.ಹಿಂದೆ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದ. ಜನಪರ ಯೋಜನೆಗಳಾದ ಅನ್ನಭಾಗ್ಯದ ಅಕ್ಕಿಯನ್ನು ಕಡಿತಗೊಳಿಸಿದೆ, ಇಂದಿರಾ ಕ್ಯಾಂಟೀನ್ ಮುಚ್ಚುವ ಹಂತ ತಲುಪಿದೆ, ಪಶು ಭಾಗ್ಯ, ಕ್ಷೀರಧಾರೆ, ವಿದ್ಯಾರ್ಥಿ ವೇತನಗಳನ್ನು ನಿಲ್ಲಿಸಲಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಗ ಯುಪಿಎ ಸರ್ಕಾರದ ಅವಧಿಯಲ್ಲಿ ಸಿಲಿಂಡರ್ ಬೆಲೆ ರೂ.350 ಆಗಿದ್ದನ್ನೇ ಪ್ರಶ್ನಿಸಿ ಹೋರಾಟ ಮಾಡಿದ್ದರು. ಆದರೆ ಈಗ ಬಿಜೆಪಿ ಅಧಿಕಾರದಲ್ಲಿ ಸಿಲಿಂಡರ್ ಬೆಲೆ ರೂ.800, ಪೆಟ್ರೋಲ್ ಬೆಲೆ ರೂ.86, ಡೀಸೆಲ್ ರೂ.80 ಆಗಿದೆ. ಇದರಿಂದ ವಾಹನ ಸವಾರರಿಗೆ ದೊಡ್ಡ ಸಮಸ್ಯೆ ಎದುರಾಗಿದೆ. ಕೇಂದ್ರ ಸರ್ಕಾರ ಮಾತ್ರಾ ಕಣ್ಣುಮುಚ್ಚಿ ಕೂತ್ತಿದೆ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಮೋದಿ ಮನ್ ಕೀ ಬಾತ್ ನಲ್ಲಿ ದೇಶದ ಸಮಸ್ಯೆಯ ಬಗ್ಗೆ ಒಮ್ಮೆಯಾದರು ಮಾಡತಾಡಿದ್ದಾರ ಎಂದು ಪ್ರಶ್ನಿಸುವ ಮೂಲಕ 7 ವರ್ಷದ ಹಿಂದೆ ಹೇಳಿದ್ದ ಅಚ್ಚೇ ದಿನ್ ಪದವನ್ನು ಬಿಜೆಪಿಗರೆ ಮರೆತಿದ್ದಾರೆಂದಿದ್ದಾರೆ. ಇತ್ತ ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿಗರು ಬಂಡವಾಳ ಶಾಹಿಗಳ ಕೈಗೊಂಬೆಯಾಗಿದ್ದಾರೆ.

ಕಾಂಗ್ರೆಸ್‌ ಪಕ್ಷ ಬಿಜೆಪಿಯ ಭ್ರಷ್ಟ ಆಡಳಿತವನ್ನು ಮತ್ತು ಕಾಂಗ್ರೆಸ್‌ ಜಾರಿಗೆ ತಂದ ಜನ ಪರ ಯೋಜನೆಗಳನ್ನು ಪ್ರತಿ ಮನೆಗೂ ತಿಳಿಸುವಂತೆ ಮಾಡಬೇಕು. ಇದರಿಂದ ಬೂತ್‌ ಮಟ್ಟದಲ್ಲಿ ಕಮಿಟಿಗಳನ್ನು ರಚಿಸಿ ಒಗ್ಗಟ್ಟಿನಿಂದ ಪಕ್ಷವನ್ನು ಸಂಘಟಿಸ ಬೇಕೆಂದು ಕಾಂಗ್ರೆಸ್‌ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com