10 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಪ್ರಸ್ತಾವ

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ‌ಕುಮಾರ್‌ ಇಲಾಖೆಯ ಅಧಿಕಾರಿಗಳೊಂದಿಗೆ ನಗರದಲ್ಲಿ ನಡೆಸಿದ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
10 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಪ್ರಸ್ತಾವ

ಕಲ್ಯಾಣ ಕರ್ನಾಟಕ (ಹೈದರಾಬಾದ್‌ ಕರ್ನಾಟಕ) ಭಾಗದ ಶಾಲೆಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕದ ಪ್ರಸ್ತಾವವನ್ನು ಮುಂದಿನ ಬಜೆಟ್‌ನಲ್ಲಿ ಸೇರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದಲ್ಲದೆ ಇನ್ನೂ ನಾಲ್ಕು ಪ್ರಮುಖ ಪ್ರಸ್ತಾವವನ್ನು ಬಜೆಟಿನಲ್ಲಿ ಸೇರಿಸಲು ಇಲಾಖೆ ನಿರ್ಧರಿಸಿದೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ಮುಂದಿನ ವರ್ಷದ ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ಪ್ರಸ್ತಾವಗಳನ್ನು ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ‌ಕುಮಾರ್ ಇಲಾಖೆಯ ಅಧಿಕಾರಿಗಳೊಂದಿಗೆ ನಗರದಲ್ಲಿ ನಡೆಸಿದ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಐದು ಪ್ರಮುಖ ಪ್ರಸ್ತಾವಗಳು

1) ಕಲ್ಯಾಣ ಕರ್ನಾಟಕ ಭಾಗದಲ್ಲಿ 8 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು 2 ಸಾವಿರ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ

2) ಒಂದು ಸಾವಿರ ಶಾಲೆಗಳನ್ನು ಉಭಯ ಮಾಧ್ಯಮ ಶಾಲೆಗಳಾಗಿ ಪರಿವರ್ತಿಸುವುದು

3) ರಾಷ್ಟ್ರೀಯ ಶಿಕ್ಷಣ ನೀತಿಯನ್ನು(NEP-2020) ರಾಜ್ಯದಲ್ಲಿ ಅಳವಡಿಸಿಕೊಳ್ಳುವ ಸಲುವಾಗಿ ʼರಾಜ್ಯ ಶಾಲಾ ಶಿಕ್ಷಣ ಆಯೋಗʼ ಎಂಬ ಸ್ವಾಯತ್ತ ಸಂಸ್ಥೆ ಸ್ಥಾಪನೆ

4) 1995ರಿಂದ 2000ದವರೆಗೆ ಪ್ರಾರಂಭಗೊಂಡ ಕನ್ನಡ ಮಾಧ್ಯಮದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು

5) ರಾಜ್ಯದ 25 ಗ್ರಾಮ ಪಂಚಾಯತಿಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ 25 ವಾರ್ಡುಗಳಲ್ಲಿ ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ 5ರಿಂದ 12ನೇ ತರಗತಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪಂಚಾಯಿತಿ ಅಥವಾ ವಾರ್ಡ್ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದು.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com