ವಿಧಾನಪರಿಷತ್‌ ಗಲಾಟೆಗೆ ಅಶ್ವತ್ಥನಾರಾಯಣ, ಮಾಧುಸ್ವಾಮಿಯೇ ಕಾರಣ: ಮಧ್ಯಂತರ ವರದಿ ಸಲ್ಲಿಸಿದ ಸದನ ಸಮಿತಿ

ವಿಧಾನಪರಿಷತ್ತಿನಲ್ಲಿ ನಡೆದ ಗಲಾಟೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮತ್ತು ಸಚಿವ ಜೆ.ಸಿ ಮಾಧುಸ್ವಾಮಿ ಅವರೇ ಕಾರಣರು’ ಎಂದು ಸದನ ಸಮಿತಿ ತಿಳಿಸಿದೆ
ವಿಧಾನಪರಿಷತ್‌ ಗಲಾಟೆಗೆ ಅಶ್ವತ್ಥನಾರಾಯಣ, ಮಾಧುಸ್ವಾಮಿಯೇ ಕಾರಣ: ಮಧ್ಯಂತರ ವರದಿ ಸಲ್ಲಿಸಿದ ಸದನ ಸಮಿತಿ

ವಿಧಾನ ಪರಿಷತ್ ಅಧಿವೇಶನದ ಸಮಯದಲ್ಲಿ ಡಿಸೆಂಬರ್ 15 ರಂದು ನಡೆದ ಅಹಿತಕರ ಘಟನೆಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಚಿಸಲಾಗಿದ್ದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯ ಸದನ ಸಮಿತಿ ಇಂದು 84 ಪುಟಗಳ ಮಧ್ಯಂತರ ವರದಿಯನ್ನು ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಸಲ್ಲಿಸಿದ್ದು, ಪೂರ್ಣ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ಕೇಳಿದೆ.

ತನ್ನ ಮಧ್ಯಂತರ ವರದಿಯಲ್ಲಿ, ವಿಧಾನಪರಿಷತ್ತಿನಲ್ಲಿ ನಡೆದ ಗಲಾಟೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮತ್ತು ಸಚಿವ ಜೆ.ಸಿ ಮಾಧುಸ್ವಾಮಿ ಅವರೇ ಕಾರಣರು’ ಎಂದು ಸದನ ಸಮಿತಿ ತಿಳಿಸಿದೆ. ಅಲ್ಲದೆ, ಅಶ್ವತ್ಥನಾರಾಯಣ, ಮಾಧುಸ್ವಾಮಿ ಮತ್ತು ಗಲಾಟೆ ಮಾಡಿದ ಇತರರ ಸದಸ್ಯರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆಯೂ ಸಮಿತಿ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸದ್ಯ, ಸದನ ಸಮಿತಿಯು 84 ಪುಟಗಳ ಮಧ್ಯಂತರ ವರದಿ ಸಲ್ಲಿಸಿದ್ದು, ವಿಚಾರಣೆಗೆ ಇನ್ನೂ ಹೆಚ್ಚಿನ ಕಾಲಾವಕಾಶಕ್ಕೆ ಮನವಿ ಮಾಡಿದೆ. ಈ ಸಮಿತಿಗೆ ಬಿಜೆಪಿಯ ಎಚ್‌.ವಿಶ್ವನಾಥ್‌ ಮತ್ತು ಎಸ್‌.ವಿ.ಸಂಕನೂರು ಅವರು ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ ಮತ್ತು ಆರ್‌.ಬಿ.ತಿಮ್ಮಾಪೂರ ಅವರು ಮಾತ್ರ ಉಳಿದಿದ್ದರು.

ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್‌ ಕಾರ್ಯದರ್ಶಿ, ಮಾರ್ಷಲ್‌, ಕಾಂಗ್ರೆಸ್ ಸದಸ್ಯ ಪಿ.ಆರ್‌.ರಮೇಶ್ ಅವರಿಂದ ಹೇಳಿಕೆ ಪಡೆಯಲಾಗಿದೆ. ಉಪಸಭಾಪತಿ ಎಸ್‌.ಎಲ್.ಧರ್ಮೇಗೌಡ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್‌ ನೋಟ್‌ ಕೋರಿ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದೆ.

‘ಕಲಾಪದ ವೇಳೆ ಉಪಸ್ಥಿತರಿದ್ದ ಪತ್ರಕರ್ತರು, ಘಟನೆ ಕುರಿತು ಪತ್ರಕರ್ತರು, ಗಣ್ಯರು ಸಭಾಪತಿಗೆ ಬರೆದ ಪತ್ರಗಳನ್ನು ಪರಿಗಣಿಸಿ ಅಭಿಪ್ರಾಯ ಪಡೆಯಲು ಉದ್ದೇಶಿಸಲಾಗಿದೆ. ಮಧ್ಯಂತರ ವರದಿಯಲ್ಲಿ ಏನಿದೆ ಎಂಬುದು ಸದನದಲ್ಲೇ ಬಹಿರಂಗವಾಗಲಿದೆ. ವರದಿ ಈಗ ಸದನದ ಸ್ವತ್ತು’ ಎಂದು ಮರಿತಿಬ್ಬೇಗೌಡ ಹೇಳಿದ್ದಾರೆ.

ಈ ನಡುವೆ, ಸದನ ಸಮಿತಿಯ ರಚನೆಯನ್ನೇ ಬಿಜೆಪಿ ಸದಸ್ಯರು ಪ್ರಶ್ನಿಸಿದ್ದಾರೆ. ಬಿ ಕೆ ಹರಿಪ್ರಸಾದ್‌ ಮತ್ತು ಮರಿತಿಬ್ಬೇಗೌಡ ಅವರು ಗಲಾಟೆಯಲ್ಲಿ ಪಾಲ್ಗೊಂಡಿದ್ದವರು. ಅವರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡುವುದರಿಂದ ನಿಷ್ಪಕ್ಷಪಾತ ವರದಿ ಬರಲು ಸಾಧ್ಯವಿಲ್ಲ ಎಂದು ಬಿಜೆಪಿಗರು ಆರೋಪಿಸಿದ್ದರು.

ವಿಧಾನಪರಿಷತ್‌ ಗಲಾಟೆಗೆ ಅಶ್ವತ್ಥನಾರಾಯಣ, ಮಾಧುಸ್ವಾಮಿಯೇ ಕಾರಣ: ಮಧ್ಯಂತರ ವರದಿ ಸಲ್ಲಿಸಿದ ಸದನ ಸಮಿತಿ
ಈ ಸೌಭಾಗ್ಯಕ್ಕೆ ನಮಗೆ ಪರಿಷತ್ ಎಂಬ ಮತ್ತೊಂದು ಸದನ ಬೇಕೆ?

ಡಿ.15 ರಂದು ನಡೆದ ಗಲಾಟೆಗೆ ಸಂಬಂಧಿಸಿದಂತೆ ರಚಿಸಿರುವ ಸದನ ಸಮಿತಿ ಶಾಸನ ಬದ್ಧವಾಗಿದ್ದು, ಸಮಿತಿಯ ವರದಿಯೂ ಶಾಸನ ಬದ್ಧ ಎಂದು ಅವರು ಪ್ರತಾಪಚಂದ್ರ ಶೆಟ್ಟಿ ಸಮರ್ಥಿಸಿಕೊಂಡಿದ್ದಾರೆ.

ವಿಧಾನ ಸೌಧದ ಸಭಾಪತಿಗಳ ಕೊಠಡಿಯಲ್ಲಿ ವರದಿ ಸಲ್ಲಿಸಿ ಮಾತಾನಾಡಿದ ಮರಿತಿಬ್ಬೇಗೌಡ. ಸಮಿತಿಗೆ 20 ದಿನಗಳ ಕಾಲಾವಕಾಶ ನೀಡಲಾಗಿತ್ತು, ಈವರೆಗೆ ಸಮಿತಿ ಒಟ್ಟು ಐದು ಸಭೆಗಳನ್ನು ನಡೆಸಿದ್ದು, ಹೆಚ್ಚಿನ ಸಮಯವಾಕಾಶ ಬೇಕಾಗಿದೆ. ಆದ್ದರಿಂದ, ಸಮಿತಿಯ ಮೊದಲ ನಾಲ್ಕು ಸಭೆಗಳ ಮಾಹಿತಿಯನ್ನೊಳಗೊಂಡ ವರದಿ ಹಾಗೂ ಸಾಕ್ಷ್ಯದಾರಗಳನ್ನು ಸಿ.ಡಿ ರೂಪದಲ್ಲಿ ಮಧ್ಯಂತರ ವರದಿಯಲ್ಲಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಪರಿಷತ್‌ ಗಲಾಟೆಗೆ ಅಶ್ವತ್ಥನಾರಾಯಣ, ಮಾಧುಸ್ವಾಮಿಯೇ ಕಾರಣ: ಮಧ್ಯಂತರ ವರದಿ ಸಲ್ಲಿಸಿದ ಸದನ ಸಮಿತಿ
ವಿಧಾನ ಪರಿಷತ್‌ನಲ್ಲಿ ನಡೆದ ಗೂಂಡಾಗಿರಿ ಪ್ರಜಾಪ್ರಭುತ್ವದ ಕಗ್ಗೊಲೆ - ಸಿದ್ದರಾಮಯ್ಯ

ಸಂಪೂರ್ಣ ವರದಿ ಸಲ್ಲಿಸಲು ಇನ್ನೂ ಹೆಚ್ಚಿನ ಸಮಯವಾಕಾಶ ಕೇಳಲಾಗುವುದು. ಘಟನೆಯ ಕುರಿತು ಈವರೆಗೆ ನಡೆಸಿದ ಐದು ಸಭೆಗಳಲ್ಲಿ ಅಂದು ವಿಧಾನ ಪರಿಷತ್‍ನಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಕಾರ್ಯದರ್ಶಿ, ಮಾರ್ಷಲ್ಸ್ ಮತ್ತು ವಿಧಾನ ಪರಿಷತ್ ಸದಸ್ಯ ರಮೇಶ್ ಅವರಿಗೆ ನೋಟಿಸ್ ನೀಡಿ ಪ್ರಾಥಮಿಕ ಹೇಳಿಕೆ ಪಡೆಯಲಾಗಿದೆ. ಅಂದಿನ ಅಧಿವೇಶನದಲ್ಲಿ ಹಾಜರಿದ್ದು ಅಧಿವೇಶನದ ಕಲಾಪಗಳನ್ನು ಚಿತ್ರೀಕರಿಸಿರುವ ಖಾಸಗಿ ಸುದ್ದಿ ವಾಹಿನಿಗಳು, ವಿಧಾನ ಪರಿಷತ್‍ನ ವೆಬ್‍ಕಾಸ್ಟ್, ಲೋಕೋಪಯೋಗಿ ಇಲಾಖೆ ನಿರ್ವಹಿಸುವ ಸಿಸಿ ಕ್ಯಾಮೆರಾ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಘಟನೆ ಕುರಿತು ಮಾಹಿತಿ ಪಡೆಯುವ ಅಗತ್ಯವಿದೆ ಎಂದು ಸಮಿತಿ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.

ವಿಧಾನಪರಿಷತ್‌ ಗಲಾಟೆಗೆ ಅಶ್ವತ್ಥನಾರಾಯಣ, ಮಾಧುಸ್ವಾಮಿಯೇ ಕಾರಣ: ಮಧ್ಯಂತರ ವರದಿ ಸಲ್ಲಿಸಿದ ಸದನ ಸಮಿತಿ
ವಿಧಾನ ಮಂಡಲ ಅಧಿವೇಶನ: ಕರೊನಾ ನೆಪದಲ್ಲಿ ಪಲಾಯನ ಮಾಡಲು ಯತ್ನಿಸುತ್ತಿರುವ BSY, ಬಿಡಲೊಲ್ಲದ ಸಿದ್ದರಾಮಯ್ಯ

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com