ಶಿವಮೊಗ್ಗ ಜಿಲೆಟಿನ್ ಸ್ಪೋಟ: ಸ್ಥಳಕ್ಕೆ ಭೇಟಿ ನೀಡಿದ ಸಿಎಂ: ನಿಷ್ಪಕ್ಷಪಾತ ತನಿಖೆಯ ಭರವಸೆ

ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ತನಿಖೆಯ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ. ನಿಷ್ಪಕ್ಷವಾದ ತನಿಖೆಯಿಂದ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು
ಶಿವಮೊಗ್ಗ ಜಿಲೆಟಿನ್ ಸ್ಪೋಟ: ಸ್ಥಳಕ್ಕೆ ಭೇಟಿ ನೀಡಿದ ಸಿಎಂ: ನಿಷ್ಪಕ್ಷಪಾತ ತನಿಖೆಯ ಭರವಸೆ

ಶಿವಮೊಗ್ಗದ ಹುಣಸೋಡು ದುರ್ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, “ಗುರುವಾರ ರಾತ್ರಿ ಹುಣಸೋಡು ಕಲ್ಲು ಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಇದುವರೆಗೆ 6 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಹೈದ್ರಾಬಾದ್‍ನಿಂದ ಆಗಮಿಸಿದ ಡೈರೆಕ್ಟರ್ ಆಫ್ ಎಕ್ಸ್‍ಪ್ಲೋಸಿವ್‍ಸ್ ತಂಡ ಈಗಾಗಲೇ ಪ್ರಾಥಮಿಕ ತನಿಖೆಯನ್ನು ಕೈಗೊಂಡಿದೆ. ಸ್ಥಳೀಯವಾಗಿ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತಂಡ ಘಟನೆಯ ತನಿಖೆಯನ್ನು ನಡೆಸುತ್ತಿದೆ” ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಜಿಲೆಟಿನ್ ಸ್ಪೋಟ: ಸ್ಥಳಕ್ಕೆ ಭೇಟಿ ನೀಡಿದ ಸಿಎಂ: ನಿಷ್ಪಕ್ಷಪಾತ ತನಿಖೆಯ ಭರವಸೆ
ಮಲೆನಾಡನ್ನು ಬೆಚ್ಚಿಬೀಳಿಸಿದ ಸ್ಫೋಟ: ಅಕ್ರಮ ಕ್ವಾರಿ ದಂಧೆಗೆ ಹಲವರ ಬಲಿ

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ದುರ್ಘಟನೆಯಲ್ಲಿ ಸಾವಿಗೀಡಾದ ಮೃತರ ಕುಟುಂಬಗಳಿಗೆ ಈಗಾಗಲೇ 5ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಘಟನೆಯಲ್ಲಿ ಸ್ಫೋಟಕದ ಬಳಕೆ, ಅದು ಎಲ್ಲಿಂದ ಬಂತು ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಈ ಪ್ರದೇಶದಲ್ಲಿರುವ ಎಲ್ಲಾ ಕ್ರಶರ್‍ಗಳು ಪರವಾನಿಗೆ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ. ಆದರೆ ಇಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿ ಇರುವುದಿಲ್ಲ.ಇದು ಪರಿಸರ ಸೂಕ್ಷ್ಮ ಪ್ರದೇಶವಾಗಿದ್ದು, ಈ ಕುರಿತು ಸರ್ಕಾರ ಮರು ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ತನಿಖೆಯ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ. ನಿಷ್ಪಕ್ಷವಾದ ತನಿಖೆಯಿಂದ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಶಿವಮೊಗ್ಗ ಜಿಲೆಟಿನ್ ಸ್ಪೋಟ: ಸ್ಥಳಕ್ಕೆ ಭೇಟಿ ನೀಡಿದ ಸಿಎಂ: ನಿಷ್ಪಕ್ಷಪಾತ ತನಿಖೆಯ ಭರವಸೆ
ಶಿವಮೊಗ್ಗ ಕಲ್ಲುಕ್ವಾರೆ ಸ್ಫೋಟ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಘೋಷಣೆ: ಮೂವರ ಬಂಧನ
ಶಿವಮೊಗ್ಗ ಜಿಲೆಟಿನ್ ಸ್ಪೋಟ: ಸ್ಥಳಕ್ಕೆ ಭೇಟಿ ನೀಡಿದ ಸಿಎಂ: ನಿಷ್ಪಕ್ಷಪಾತ ತನಿಖೆಯ ಭರವಸೆ
ಅಕ್ರಮ ಗಣಿಗಾರಿಕೆಗೆ ಯಡಿಯೂರಪ್ಪ ಸಾಥ್‌ ನೀಡಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com