ಜನವರಿ 29 ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಜೆಟ್ ಅಧಿವೇಶನದ ಭಾಷಣವನ್ನು ಅನೇಕ ವಿಪಕ್ಷಗಳು ಬಹಿಷ್ಕರಿಸಿವೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಈ ನಿರ್ಧಾರ ತೆಗೆದು ಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್ ಕೂಡ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಜೆಡಿಎಸ್ ಹಿರಿಯ ನಾಯಕ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ಕೇಂದ್ರದ ಮೋದಿ ಸರಕಾರ ಜಾರಿಗೆ ತಂದಿರುವಂತಹ ರೈತ ವಿರೋಧಿ ಕೃಷಿಕಾಯ್ದೆಗಳನ್ನು ವಿರೋಧಿಸಿ 17 ವಿಪಕ್ಷಗಳು ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸಿವೆ.
ಕರ್ನಾಟಕದ ಪ್ರಾದೇಶಿಕ ಪಕ್ಷ ಜನತಾದಳ (ಜೆಡಿಎಸ್) ಕೂಡ ಸಂಸತ್ ಜಂಟಿ ಅಧಿವೇಶನದ ರಾಷ್ಟ್ರಪತಿಯವರ ಭಾಷಣ ಬಹಿಷ್ಕರಿಸುತ್ತೇವೆ ಎಂದು ಜೆಡಿಎಸ್ ಹಿರಿಯ ನಾಯಕ ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಮೂರು ಕೃಷಿಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಮ್ಮ ಪಕ್ಷ ಸದಾ ಬೆಂಬಲವಾಗಿ ನಿಲ್ಲುತ್ತದೆ. ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಸಂಸತ್ ಅಧಿವೇಶನದಲ್ಲಿ ಭಾಗಿಯಾಗದಿರಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.