ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ 2021 ಜನವರಿ 24 ರಂದು ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕ ಹುದ್ದೆಯ(ಎಫ್ಡಿಎ) ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪರೀಕ್ಷೆ ಹಿಂದಿನ ದಿನ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿತ್ತು. ಮುಂದೂಡಲಾದ ಪರೀಕ್ಷೆಯನ್ನು ಫೆ 28 ಕ್ಕೆ ನಡೆಸಲಾಗುತ್ತಿದೆ ಎಂದು ಆಯೋಗ ತಿಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ವಿಚಾರ ಸಿಸಿಬಿ ಪೊಲೀಸರು ಸ್ಪಷ್ಟ ಪಡಿಸಿದ್ದರಿಂದ ಕರ್ನಾಟಕ ಲೋಕಸೇವಾ ಆಯೋಗವು ಪರೀಕ್ಷೆಯ ( ಜನವರಿ 23 ) ಹಿಂದಿನ ದಿನವೇ ಪರೀಕ್ಷೆ ಮುಂದೂಡಲಾಗಿದೆ ಎಂದು ತಿಳಿಸಿತ್ತು. ಈ ವಿಚಾರ ತಿಳಿದ ಪರಿಕ್ಷಾರ್ಥಿಗಳು ಆಯೋಗದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಮುಂದೂಡಲಾದ ಪರೀಕ್ಷೆಯನ್ನು ಫೆಬ್ರವರಿ 28 ರಂದು ನಡೆಸಲಾಗುತ್ತದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ನೀಡಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.