ಪರಿಷತ್‌ ಸಭಾಪತಿ ಸ್ಥಾನಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜಿನಾಮೆ

ಈ ಬಾರಿಯ ಪರಿಷತ್‌ ಕಲಾಪ ಮುಗಿದ ಬಳಿಕ, ಉಪ ಸಭಾಧ್ಯಕ್ಷರಿಗೆ ರಾಜಿನಾಮೆಯನ್ನು ಸಲ್ಲಿಸಲಿದ್ದಾರೆ.
ಪರಿಷತ್‌ ಸಭಾಪತಿ ಸ್ಥಾನಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜಿನಾಮೆ

ಕರ್ನಾಟಕ ವಿಧಾನ ಪರಿಷತ್‌ ಸಭಾಧ್ಯಕ್ಷರಾಗಿರುವ ಪ್ರತಾಪ್‌ಚಂದ್ರ ಶೆಟ್ಟಿಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಪ್ರತಾಪ್‌ಚಂದ್ರ ಶೆಟ್ಟಿ ಅವರ ವಿರುದ್ದ ಅವಿಶ್ವಾಸ ನಿರ್ಣಯನ್ನು ಮಂಡಿಸುವ ಮುನ್ನವೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ನಿರ್ಧಾರವನ್ನು ಅವರು ತಾಳಿದ್ದಾರೆ.

ಈ ಬಾರಿಯ ಪರಿಷತ್‌ ಕಲಾಪ ಮುಗಿದ ಬಳಿಕ, ಉಪ ಸಭಾಧ್ಯಕ್ಷರಿಗೆ ರಾಜಿನಾಮೆಯನ್ನು ಸಲ್ಲಿಸಲಾಗುತ್ತದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಪರಿಷತ್‌ನಲ್ಲಿ ಕೋಲಾಹಲವೇ ನಡೆದು ಹೋಗಿತ್ತು. ಇದರಿಂದಾಗಿ ಪರಿಷತ್‌ನ ಮಾನ ದೊಡ್ಡ ಮಟ್ಟದಲ್ಲಿ ಹರಾಜಾಗಿತ್ತು. ಆ ನಂತರ ಮನನೊಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಪ್ರತಾಪ್‌ಚಂದ್ರ ಶೆಟ್ಟಿ ಅವರು ತೀರ್ಮಾನಿಸಿದ್ದರು.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com