ಪರಿಶಿಷ್ಟ ಜಾತಿ-ಪಂಗಡಗಳ ಹಿತಾಸಕ್ತಿಯನ್ನು ರಕ್ಷಿಸುವವರು ಇಲ್ಲದಂತಾಗಿದೆ -ಸಿದ್ದರಾಮಯ್ಯ

ಸರ್ವೋಚ್ಛ ನ್ಯಾಯಾಲಯ ತನ್ನ ಆದೇಶದಲ್ಲಿ ಈ 29 ಜಾತಿಗಳನ್ನು ಮಾತ್ರ ಗುರಿಯಾಗಿಸಿಕೊಂಡು ಜಾಗೃತ ಕೋಶದವರು ಪರಿಶೀಲನೆ ಮಾಡಬೇಕೆಂದು ಖಂಡಿತ ಹೇಳಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ತಪ್ಪು ವ್ಯಾಖ್ಯಾನ ಮಾಡಿ ಕೆಲವೇ ಜಾತಿಗಳನ್ನು ಗುರಿಯಾಗಿಸಿಕೊಂಡು ಈ ಸರ್ಕಾರ ಆದೇಶವನ್ನು ಹೊರಡಿಸಿದೆ.
ಪರಿಶಿಷ್ಟ ಜಾತಿ-ಪಂಗಡಗಳ ಹಿತಾಸಕ್ತಿಯನ್ನು ರಕ್ಷಿಸುವವರು ಇಲ್ಲದಂತಾಗಿದೆ -ಸಿದ್ದರಾಮಯ್ಯ

ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ವಾಪಸ್ ಪಡೆಯಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗಳ ಹಿತಾಸಕ್ತಿಯನ್ನು ರಕ್ಷಿಸುವವರು ಇಲ್ಲದಂತಾಗಿದೆ. ಇದಕ್ಕೆ ಜನವರಿ 16 ರಂದು ಸಮಾಜ ಕಲ್ಯಾಣ ಇಲಾಖೆ ಹೊರಡಿಸಿರುವ ಆದೇಶವೇ ಸಾಕ್ಷಿ. ಈ ಆದೇಶದಲ್ಲಿ ಕೆಲವು ನಿರ್ದಿಷ್ಟ ಜಾತಿಗಳಿಗೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಜಾಗೃತ ಕೋಶ) ದಿಂದ ವರದಿ ಪಡೆದು ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡತಕ್ಕದ್ದು ಎಂದು ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪರಿಶಿಷ್ಟ ವರ್ಗದ 21 ಜಾತಿಗಳನ್ನು, ಪರಿಶಿಷ್ಟ ಜಾತಿಯ 8 ಜಾತಿಗಳನ್ನು ಗುರಿಯಾಗಿಸಿಕೊಂಡು ಸರ್ಕಾರ ಆದೇಶ ಹೊರಡಿಸಿದೆ. ತನ್ನ ಈ ಆದೇಶಕ್ಕೆ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿದೆ. ಆದರೆ ಸರ್ವೋಚ್ಛ ನ್ಯಾಯಾಲಯ ತನ್ನ ಆದೇಶದಲ್ಲಿ ಈ 29 ಜಾತಿಗಳನ್ನು ಮಾತ್ರ ಗುರಿಯಾಗಿಸಿಕೊಂಡು ಜಾಗೃತ ಕೋಶದವರು ಪರಿಶೀಲನೆ ಮಾಡಬೇಕೆಂದು ಹೇಳಿಲ್ಲ. ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಹಲವು ವರ್ಷಗಳಿಂದ ವಿಚಾರಣೆಯಾಗದೆ ಬಾಕಿಯಿರುವ ಪ್ರಕರಣಗಳ ಸಂಖ್ಯೆಯೇ ಸಾಕಷ್ಟಿದೆ. ಅವುಗಳನ್ನೇ ಇನ್ನೂ ಇತ್ಯರ್ಥಪಡಿಸದೆ ಅರ್ಜಿಗಳನ್ನು ಕಚೇರಿಯಲ್ಲಿ ಕೊಳೆ ಹಾಕಿಕೊಂಡು, ಅಲ್ಲಿನ‌ ಅಧಿಕಾರಿಗಳು ಜನರನ್ನು ಅಯ್ಯೊ ಎನ್ನಿಸುತ್ತಿದ್ದಾರೆ. ಇಂತಹ ಇಲಾಖೆಯು ಸರ್ಕಾರಿ ನೌಕರಿಗೆ ಆಯ್ಕೆಯಾದ ಅಭ್ಯರ್ಥಿಗಳ ಜಾತಿಯ ಕುರಿತಾದ ವಿವರಗಳನ್ನು ನಿರ್ಧಿಷ್ಟ ಅವಧಿಯಲ್ಲಿ ತನಿಖೆ ಮಾಡಿ ಸಲ್ಲಿಸಲು ಸಾಧ್ಯವಿದೆಯೆ? ಇದು ಹೊಸ ಆದೇಶದಲ್ಲಿ ಉಲ್ಲೇಖಿಸಲಾಗಿರುವ ಸಮುದಾಯಗಳ ಅಭ್ಯರ್ಥಿಗಳಿಗೆ ಕಿರುಕುಳ ನೀಡಲು ಹಾಗೂ ಇನ್ನಷ್ಟು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡಲು ನೆರವಾದಂತಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಇದೇ ವಿಚಾರದ ಕುರಿತಂತೆ ಮುಖ್ಯಮಂತ್ರಿಗೆ ಬಹಿರಂಗ ಪತ್ರ ಬರೆದಿದ್ದ ಸಿದ್ದರಾಮಯ್ಯ ಅವರು, ಪರಿಶಿಷ್ಟ ವರ್ಗದ ಜಾತಿಗಳಲ್ಲಿ 21 ಜಾತಿಗಳನ್ನು, ಪರಿಶಿಷ್ಟ ಜಾತಿಯಲ್ಲಿ 8 ಜಾತಿಗಳನ್ನು ಗುರಿಯಾಗಿಸಿಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ. ಆದರೆ ಈ ಆದೇಶ ಹೊರಡಿಸಲು ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯ ತನ್ನ ಆದೇಶದಲ್ಲಿ ಈ 29 ಜಾತಿಗಳನ್ನು ಮಾತ್ರ ಗುರಿಯಾಗಿಸಿಕೊಂಡು ಜಾಗೃತ ಕೋಶದವರು ಪರಿಶೀಲನೆ ಮಾಡಬೇಕೆಂದು ಖಂಡಿತ ಹೇಳಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ತಪ್ಪು ವ್ಯಾಖ್ಯಾನ ಮಾಡಿ ಕೆಲವೇ ಜಾತಿಗಳನ್ನು ಗುರಿಯಾಗಿಸಿಕೊಂಡು ಈ ಸರ್ಕಾರ ಆದೇಶವನ್ನು ಹೊರಡಿಸಿದೆ.

ನಾಗರೀಕ ಹಕ್ಕು ಜಾತಿ ನಿರ್ದೇಶನಾಲಯ (ಜಾಗೃತ ಕೋಶ) ಮುಂದೆ ಹಲವು ವರ್ಷಗಳಿಂದ ಅಸಂಖ್ಯಾತ ಪ್ರಕರಣಗಳು ತನಿಖೆಗಾಗಿ/ ವಿಚಾರಣೆಗಾಗಿ ಬಾಕಿ ಇವೆ. ಅವುಗಳನ್ನು ಇತ್ಯರ್ಥ ಪಡಿಸದೆ ಕೊಳೆ ಹಾಕಿಕೊಂಡು ಜನರನ್ನು ಅಯ್ಯೊ ಎನ್ನಿಸುತ್ತಾ ಇಲ್ಲಿನ ಅಧಿಕಾರಿಗಳು ಕೂತಿದ್ದಾರೆ. ಇಂತಹ ಇಲಾಖೆಗೆ ಸರ್ಕಾರದ ನೌಕರಿಗೆ ಆಯ್ಕೆಯಾದ ಅಭ್ಯರ್ಥಿಗಳ ಜಾತಿಯ ಕುರಿತಾದ ವಿವರಗಳನ್ನು ನಿರ್ಧಿಷ್ಟ ಅವಧಿಯಲ್ಲಿ ತನಿಖೆ ಮಾಡಿ ಸಲ್ಲಿಸಲು ಸಾಧ್ಯವಿದೆಯೆ? ಮೇಲಿನ ಸಮುದಾಯಗಳ ಅಭ್ಯರ್ಥಿಗಳಿಗೆ ಕಿರುಕುಳ ನೀಡಲು, ತೀವ್ರ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲು ಮಾಡಿದ ಆದೇಶ ಇದಾಗಿದೆ.

ಇಂತಹ ಸಂದರ್ಭದಲ್ಲಿ ಈ ವರ್ಗಗಳ, ಜಾತಿಗಳ ಹಿತಾಸಕ್ತಿಯನ್ನು ಕಾಪಾಡಬೇಕಾದ ಸಚಿವರುಗಳು ಮೌನವಾಗಿರುವುದು ವಿಷಾದನೀಯ ಸಂಗತಿ. ಇದೇ ವರ್ಗವನ್ನು ಪ್ರತಿನಿಧಿಸುವ ಸಮಾಜ ಕಲ್ಯಾಣ ಸಚಿವರು ಈ ಆದೇಶವನ್ನು ಹೊರಡಿಸಲು ಅನುಮೋದನೆ ನೀಡಿರುವುದನ್ನು ನೋಡಿದರೆ ಈ ವರ್ಗಗಳ ಕುರಿತಂತೆ ಅವರ ಕಾಳಜಿ ಎಂಥದ್ದು ಎಂದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com