ರಾಜ್ಯ
ಫೆಬ್ರವರಿ 20 ರಿಂದ ಡಿ.ಕೆ ಶಿವಕುಮಾರ್ ರಾಜ್ಯ ಪ್ರವಾಸ
ಎರಡು ವಿಧಾನಸಭಾ ಕ್ಷೇತ್ರ ಹಾಗು ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿರುವ ಕುರಿತು ಅಧಿಕೃತ ಅಧಿಸೂಚನೆ ಸದ್ಯದಲ್ಲಿಯೇ ಬಿಡುಗಡೆಗೊಳ್ಳುವ ಸಾಧ್ಯತೆಯಿದ್ದು, ಚುನಾವಣೆಗೆ ಕಾಂಗ್ರೆಸ್ ತನ್ನ ಕಾರ್ಯಕರ್ತರನ್ನು ಸಂಘಟಿಸುತ್ತಿದೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಫೆಬ್ರವರಿ 20 ರಿಂದ ರಾಜ್ಯ ಪ್ರವಾಸ ಮಾಡಲಿದ್ದಾರೆ. ಫೆಬ್ರವರಿ 10 ರಂದು ಪಕ್ಷದ ಕಾರ್ಯಕಾರಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.
ಎರಡು ವಿಧಾನಸಭಾ ಕ್ಷೇತ್ರ ಹಾಗು ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿರುವ ಕುರಿತು ಅಧಿಕೃತ ಅಧಿಸೂಚನೆ ಸದ್ಯದಲ್ಲಿಯೇ ಬಿಡುಗಡೆಗೊಳ್ಳುವ ಸಾಧ್ಯತೆಯಿದ್ದು, ಚುನಾವಣೆಗೆ ಕಾಂಗ್ರೆಸ್ ತನ್ನ ಕಾರ್ಯಕರ್ತರನ್ನು ಸಂಘಟಿಸುತ್ತಿದೆ. ಚುನಾವಣೆ ಎದುರಿಸಲು ಮತ್ತು ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯಕೈಗೊಳ್ಳಲು ಕಾರ್ಯಕರ್ತರನ್ನು ಸಜ್ಜುಗೊಳಿಸುತ್ತಿದೆ.
ರಾಮಲಿಂಗ ರೆಡ್ಡಿ ಮತ್ತು ಆರ್ ಧ್ರುವನಾರಾಯಣ ಪಕ್ಷದ ಕಾರ್ಯಕಾರಿ ಅಧ್ಯಕ್ಷರಾಗಿ ಫೆಬ್ರವರಿ 22 ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.