ನಾವು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಉರುಳುತ್ತಿರಲಿಲ್ಲ: ‌H ವಿಶ್ವನಾಥ್

ನೂತನ ಸಭಾಪತಿಯಾಗಿ ಆಯ್ಕೆಯಾದ ಹೊರಟ್ಟಿ ಅವರನ್ನು ಅಭಿನಂದಿಸಿ ಮಾತನಾಡುವಾಗ ಈ ವಿಷಯ ಪ್ರಸ್ತಾಪಿಸಿದ ವಿಶ್ವನಾಥ್, ‘ನಾವಿಬ್ಬರೂ ಜೆಡಿಎಸ್‌ ಪಕ್ಷದಲ್ಲಿದ್ದೆವು. ಇಬ್ಬರೂ ಮಂತ್ರಿಗಳಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ.‌ ಸದ್ಯ ಹೊರಟ್ಟಿ ಎಂಬ ಶಬರಿಯ ಶಾಪವನ್ನು ಬಿಜೆಪಿಯ ರಾಮ ವಿಮೋಚನೆ ಮಾಡಿದ್ದಾನೆ’ ಎಂದಿದ್ದಾರೆ
ನಾವು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಉರುಳುತ್ತಿರಲಿಲ್ಲ: ‌H ವಿಶ್ವನಾಥ್

ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಮತ್ತು ಬಸವರಾಜ ಹೊರಟ್ಟಿ ಇಬ್ಬರೂ ಮಂತ್ರಿಗಳಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ’ ಎಂದು ಬಿಜೆಪಿ ಸದಸ್ಯ ಎ ಎಚ್‌. ವಿಶ್ವನಾಥ್‌ ಮಂಗಳವಾರ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನೂತನ ಸಭಾಪತಿಯಾಗಿ ಆಯ್ಕೆಯಾದ ಹೊರಟ್ಟಿ ಅವರನ್ನು ಅಭಿನಂದಿಸಿ ಮಾತನಾಡುವಾಗ ಈ ವಿಷಯ ಪ್ರಸ್ತಾಪಿಸಿದ ವಿಶ್ವನಾಥ್, ‘ನಾವಿಬ್ಬರೂ ಜೆಡಿಎಸ್‌ ಪಕ್ಷದಲ್ಲಿದ್ದೆವು. ಇಬ್ಬರೂ ಮಂತ್ರಿಗಳಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ.‌ ಸದ್ಯ ಹೊರಟ್ಟಿ ಎಂಬ ಶಬರಿಯ ಶಾಪವನ್ನು ಬಿಜೆಪಿಯ ರಾಮ ವಿಮೋಚನೆ ಮಾಡಿದ್ದಾನೆ’ ಎಂದಿದ್ದಾರೆ.

ಈ ವೇಳೆ ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದ ವಿಶ್ವನಾಥ್‌, ಸೋಲು ಇರುವಲ್ಲಿ ಮುಸ್ಲಿಮರನ್ನು ಅಭ್ಯರ್ಥಿ ಮಾಡಲಾಗುತ್ತದೆ ಎಂಬ ಸಂದೇಶ ಹೋಗಬಾರದು ಅನ್ನೋ ಕಾರಣಕ್ಕೆ ನಝೀರ್‌ ಹಿಂದೆ ಸರಿದಿದ್ದಾರೆ. ಯುವ ಕಾಂಗ್ರೆಸ್‌ ಚುನಾವಣೆಯಲ್ಲಿ ಮುಸ್ಲಿಂ ಯುವಕ ಗೆದ್ದರೂ ಸೋತಿದ್ದಾನೆ, ಕಾಂಗ್ರೆಸಿನಲ್ಲಿ ಮುಸ್ಲಿಮರ ಸ್ಥಾನಮಾನ ಏನು ಎಂಬ ಪ್ರಶ್ನೆ ಬಂದಿದೆ ಎಂದು ಹೇಳಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com