ಟೂಲ್ ಕಿಟ್ ಪ್ರಕರಣದಲ್ಲಿ ದಿಶಾ ರವಿ ಬಂಧನ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಭಾರತದ ಯುವಕರು ಮತ್ತು ಯುವಕರ ಸಂಘಟನೆಗಳು ದಿಗ್ಯಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ವಾಕ್ ಸ್ವಾತಂತ್ರ ಬಹಳ ಪ್ರಮುಖವಾದುದು ನಮ್ಮ ಸಂವಿಧಾನ ನಮಗೆ ಸ್ವಾತಂತ್ರವನ್ನು ಕೊಟ್ಟಿದೆ. ಇದೀಗ ಅನ್ಯಾಯದ ವಿರುದ್ಧ ಯುವಕರು ಸ್ವಾತಂತ್ರವನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯಸರ್ಕಾರ ಬಾಯಿಮುಚ್ಚಿಸುವ ಪ್ರಯತ್ನ ಮಾಡುತ್ತಿವೆ ಇದು ಖಂಡನೀಯ ಎಂದು ಆಕ್ರೋಶ ಹೊರಹಾಕಿದ್ದಾರೆ.
ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ದಿಶಾ ರವಿಯನ್ನು ಬಂಧಿಸಿರುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಇವತ್ತಿನ ಯುವಕರಿಗೆ ಇದು ಒಂದು ಪಾಠವಲ್ಲ, ಎಚ್ಚರಿಕೆಯ ಗಂಟೆ. ಯುವಕರ ಸ್ವಾತಂತ್ರ, ಅಭಿಪ್ರಾಯ, ಅಭಿರುಚಿಯನ್ನು ಮಟ್ಟಹಾಕುವಂತಹ ಕೆಲಸ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಾಡುತ್ತಿವೆ. ಇದರ ವಿರುದ್ಧ ಪ್ರತಿಭಟನೆ ಮಾಡುವ ಅನಿವಾರ್ಯತೆ ಇದೆ ಎಂದು ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ಅನ್ಯಾಯದ ವಿರುದ್ಧ ಧ್ವನಿಯೆತ್ತುವುದು ನಮ್ಮೆಲ್ಲರ ಹಕ್ಕು ಸಿಎಎ, ಎನ್ಆರ್ಸಿ, ರೈತರ ಹೋರಾಟದಲ್ಲಿ ಬಾಯಿಮುಚ್ಚಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ತಮ್ಮ ಅಭಿಪ್ರಾಯ ಮಾರ್ಗದಶರ್ನ ಹೇಳುವ ಸ್ವಾತಂತ್ರ ಪ್ರತಿಯೊಬ್ಬ ಪ್ರಜೆಗೂ ಇದೆ. ಅದನ್ನು ಬಾಯಿಮುಚ್ಚಿಸಲು ದೇಶದಲ್ಲಿ ಯಾರಿಂದಲೂ ಸಾಧ್ಯವಿಲ್ಲ ಎಂಬುವುದನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ತಿಳಿಯಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.