ಫೆ18 ರಿಂದ ಗದಗದಲ್ಲಿ ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆ

ಹಲವು ಕ್ರೀಡಾಪಟುಗಳು ಗದುಗಿಗೆ ಆಗಮಿಸಿದ್ದು, ಬೆಳಿಗ್ಗೆ ಮತ್ತು ಸಾಯಂಕಾಲ ತಯಾರಿ ನಡೆಸುತ್ತಿದ್ದಾರೆ. ಇದನ್ನು ನೋಡಲು ಸುತ್ತಮುತ್ತಲ ಗ್ರಾಮಗಳ ಜನರು ಸಾಲುಮರದ ತಿಮ್ಮಕ್ಕ ಉದ್ಯಾನವನದತ್ತ ಧಾವಿಸುತ್ತಿದ್ದಾರೆ.
ಫೆ18 ರಿಂದ ಗದಗದಲ್ಲಿ ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆ

17ನೇ ರಾಷ್ಟ್ರೀಯ ಮೌಂಟೇನ್ ಸಿನಿಯರ್, ಜ್ಯೂನಿಯರ್ ಮತ್ತು ಸಬ್ ಜ್ಯೂನಿಯರ್ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‍ಶಿಫ್ ಸ್ಪರ್ಧೆ ಫೆ.18 ರಿಂದ 21 ರವರೆಗೆ ಜಿಲ್ಲೆಯ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ನಡೆಯಲಿದೆ. ಮೈನವಿರೇಳಿಸುವ ಈ ಸ್ಪರ್ಧೆಯಲ್ಲಿ ಸೈಕ್ಲಿಂಗ್ ಕ್ರೀಡಾಪಟುಗಳು ಗುಡ್ಡದ ತಿರುವುಗಳಲ್ಲಿ ರೇಸ್ ಗಿಳಿಯಲಿದ್ದಾರೆ.


ರಾಷ್ಟೀಯ ಮೌಂಟೇನ್ ಸಿನಿಯರ್, ಜ್ಯೂನಿಯರ್ ಮತ್ತು ಸಬ್ ಜ್ಯೂನಿಯರ್ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‍ಶಿಫ್ ಸ್ಪರ್ಧೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ, ರಾಜ್ಯ ಸೈಕ್ಲಿಂಗ್ ಸಂಸ್ಥೆ, ಜಿಲ್ಲಾ ಸೈಕ್ಲಿಂಗ್ ಸಂಸ್ಥೆಗಳಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದೇಶದ 26 ಹೊರರಾಜ್ಯಗಳಿಂದ 400 ರಿಂದ 600 ಜನ ಕ್ರೀಡಾಪಟುಗಳು ಆಗಮಿಸುತ್ತಿದ್ದು, ರಾಜ್ಯದಿಂದ 38 ಜನ ಹಾಗೂ ಜಿಲ್ಲೆಯ 7 ಜನ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೈಕ್ಲಿಂಗ್ ಸ್ಪರ್ದೆ ಆಯೋಜನೆ ಬಗ್ಗೆ ಪೂರ್ವಭಾವಿ ಸಭೆಗಳನ್ನು ನಡೆಸಿ, ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಅದರ ಅನ್ವಯ ಸ್ಪರ್ಧಿಗಳಿಗೆ ಊಟೋಪಚಾರ, ವಸತಿ, ಸಾರಿಗೆ ವ್ಯವಸ್ಥೆಯಲ್ಲಿ ಕೊರತೆಯುಂಟಾಗದಂತೆ ಜವಾಬ್ದಾರಿಯನ್ನು ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದೆ.

“ಫೆ.18 ರಂದು ಬೆಳಿಗ್ಗೆ 8 ಗಂಟೆಗೆ ಕೆ.ಹೆಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕಲ್ ಜಾಥಾ ಸಮಾವೇಷ ಆರಂಭವಾಗಿ, ಅಸುಂಡಿಯ ಕುವೆಂಪು ಮಾದರಿ ಶಾಲೆಯಲ್ಲಿ ಮುಕ್ತಾಯಗೊಳ್ಳಲಿದೆ.ಅದೇ ದಿನ ಸಂಜೆ 5 ಗಂಟೆಗೆ ನಗರದ ಕಳಸಪೂರ ರಸ್ತೆಯ ಒಳಕ್ರೀಡಾಂಣಗದಲ್ಲಿ ಉದ್ಘಾಟನೆ ನೆರವೇರಲಿದೆ. ಫೆ.19 ರಿಂದ 21 ರವರೆಗೆ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಬಿಂಕದಕಟ್ಟೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಸೈಕ್ಲಿಂಗ್ ಸ್ಪರ್ದೆಗಳು ನಡೆಸಲಾಗುವುದು”.

ಬೇರೆ ಬೇರೆ ರಾಜ್ಯಗಳಿಂದ ಸ್ಪರ್ಧಿಗಳು ಭಾಗಿ

ಅರುಣಾಚಲ ಪ್ರದೇಶ, ಬಿಹಾರ, ಆಸ್ಸಾಂ, ಚಂಡಿಗಢ, ಸಿಕ್ಕಿಂ, ದೆಹಲಿ, ಗುಜರಾತ, ಹರಿಯಾಣ, ಜಮ್ಮುಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಲ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಿಂದ ಒಟ್ಟು 435 ಜನರು ಭಾಗವಹಿಸಲಿದ್ದಾರೆ.

ತಯಾರಿ ಶುರು

ಈಗಾಗಲೇ ಹಲವು ಕ್ರೀಡಾಪಟುಗಳು ಗದುಗಿಗೆ ಆಗಮಿಸಿದ್ದು, ಬೆಳಿಗ್ಗೆ ಮತ್ತು ಸಾಯಂಕಾಲ ತಯಾರಿ ನಡೆಸುತ್ತಿದ್ದಾರೆ. ಇದನ್ನು ನೋಡಲು ಸುತ್ತಮುತ್ತಲ ಗ್ರಾಮಗಳ ಜನರು ಸಾಲುಮರದ ತಿಮ್ಮಕ್ಕ ಉದ್ಯಾನವನದತ್ತ ಧಾವಿಸುತ್ತಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com