ಬೆಂಗಳೂರು; ರೈತ ಪ್ರತಿಭಟನಾಕಾರರಿಂದ ರೈಲು ತಡೆ ಚಳವಳಿ

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು; ರೈತ ಪ್ರತಿಭಟನಾಕಾರರಿಂದ ರೈಲು ತಡೆ ಚಳವಳಿ

ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಿರುವವ ರೈತ ಸಂಘಟನೆಗಳು ರಾಷ್ಟ್ರವ್ಯಾಪ್ತಿ ರೈಲ್ ರೋಕೋ (ರೈಲು ತಡೆ) ಚಳವಳಿ ನಡೆಸಿವೆ. ಗುರುವಾರ ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ರೈಲು ರೋಕೋ ಚಳವಳಿ ನಡೆದಿದ್ದು, ದೆಹಲಿಯ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಕರೆಗೆ ಬೆಂಬಲಿಸಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾನದಲ್ಲೂ ಸಾಂಕೇತಿಕವಾಗಿ ರೈಲ್‌ ರೊಕೊ ಚಳವಳಿ ನಡೆದಿದೆ.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ಬಂಧಿಸಿ ಬಿಡುಗಡೆಗೊಳಿಸಿದ್ದಾರೆ

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರೈತರ ಪ್ರತಿಭಟನೆ ನಿಲ್ದಾಣದಲ್ಲಿ ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಪ್ರತಿಭಟನಾಕಾರರು ನಿಗದಿಪಡಿಸಿದ್ದ ಸ್ಥಳಕ್ಕೆ ಆಗಮಿಸಿಲಾಗಲಿಲ್ಲ. ಈ ಕುರಿತಂತೆ ಪ್ರತಿಧ್ವನಿಯೊಂದಿಗೆ ಪ್ರತಿಕ್ರಿಯಿಸಿದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜು, ʼಪೊಲೀಸರು ಪ್ರತಿಭಟನಾಕಾರರನ್ನು ಅಲ್ಲಲ್ಲಿ ತಡೆ ಹಿಡಿದಿದ್ದಾರೆ. ಇದರ ಹಿಂದೆ ಸರ್ಕಾರದ ಕುಮ್ಮಕ್ಕು ಇದೆ. ಸರ್ಕಾರ ರೈತರ ಪ್ರತಿಭಟನೆಯನ್ನು ಮೊಟಕುಗೊಳಿಸುವ ಪ್ರಯತ್ನ ಮಾಡುತ್ತಿದೆ. ಆದರೆ, ನಮ್ಮ ಪ್ರತಿಭಟನೆ ನಡೆದೇ ತೀರುತ್ತದೆʼ ಎಂದು ಹೇಳಿದ್ದಾರೆ.

ರೈತ ಮುಖಂಡರನ್ನು ರೈಲ್ವೇ ನಿಲ್ದಾಣದೊಳಗೆ ಹೋಗಲು ಅವಕಾಶ ನೀಡದ ಕಾರಣ ಕೆಲಕಾಲ ಪೊಲೀಸರು ಹಾಗೂ ರೈತ ಮುಖಂಡರೊಳಗೆ ಮಾತುಕತೆ ನಡೆದಿದ್ದು, ರೈತರು ಪಟ್ಟು ಬಿಡದ ಕಾರಣ ಅನಿವಾರ್ಯವಾಗಿ ಪೊಲೀಸರು ರೈತರನ್ನು ನಿಲ್ದಾಣದೊಳಗೆ ಹೋಗಲು ಅನುಮತಿ ನೀಡಿದ್ದಾರೆ.

ರೈಲ್ವೇ ನಿಲ್ದಾಣದುದ್ದಕ್ಕೂ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ, ಮೈಸೂರು, ರಾಯಚೂರು, ಗುಲ್ಬರ್ಗ, ಬೆಳಗಾವಿ, ಶಿವಮೊಗ್ಗ, ಯಾದಗಿರಿ, ಕೋಲಾರ, ಧಾರವಾಡ, ವಿಜಯಪುರ, ದಾವಣಗೆರೆ ಮೊದಲಾದ ಜಿಲ್ಲೆಗಳಲ್ಲೂ ರೈತರು ರೈಲು ತಡೆ ಚಳವಳಿಯಲ್ಲಿ ಭಾಗಿಯಾಗಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com