ಕೇರಳದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕು: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಕರ್ನಾಟಕ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತಾರ್ ಅವರು ಮಂಗಳವಾರ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ
ಕೇರಳದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕು: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಕರ್ನಾಟಕ
Mahesh Kumar A

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ವಿಪರೀತ ಏರಿಕೆಯಾಗುತ್ತಿರುವುದು ಕರ್ನಾಟಕ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದೆ. ಭಾರತದ 40 ರಿಂದ 45% ಕೋವಿಡ್‌ ಪ್ರಕರಣಗಳು ಕೇರಳವೊಂದರಲ್ಲೇ ಪತ್ತೆಯಾಗುತ್ತಿದೆ ಎಂದು ಕಳೆದ ತಿಂಗಳ ವರದಿಯೂ ಹೇಳಿತ್ತು. ಅದಾಗ್ಯೂ, ಕೇರಳದಲ್ಲಿ ಪತ್ತೆಯಾಗುತ್ತಿರುವ ಕರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರ ಕೆಲವೊಂದು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಕೇರಳದಿಂದ ರಾಜ್ಯಕ್ಕೆ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಿಂತ ಹಳೆಯದಲ್ಲದ ಕೋವಿಡ್‌ ನೆಗೆಟಿವ್‌ RT-PCR ವರದಿ ಹೊಂದಿರಬೇಕೆಂದು ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತಾರ್ ಅವರು ಮಂಗಳವಾರ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ, ʼಜಿಲ್ಲಾ ಆಯುಕ್ತರು ಈ ಸುತ್ತೋಲೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿದ್ದು, ಗಡಿಗಳಲ್ಲಿ ಕಣ್ಗಾವಲು ವ್ಯವಸ್ಥೆ ಇರುತ್ತದೆಂದು' ಹೇಳಿದ್ದಾರೆ.

ಇದಲ್ಲದೆ, ಕಳೆದ ಎರಡು ವಾರಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಬಂದವರೆಲ್ಲರೂ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಎನ್ನಲಾಗಿದೆ.

5 ಕ್ಕಿಂತ ಹೆಚ್ಚು ಪ್ರಕರಣ ಕಂಡುಬಂದ ಕ್ಲಸ್ಟರ್‌ಗಳು ಕಂಟೈನ್‌ಮೆಂಟ್‌ ಝೋನ್!‌

RTPCR ನೆಗೆಟಿವ್‌ ವರದಿ ಇದ್ದವರಿಗೆ ಮಾತ್ರ ವಿನಾಯಿತಿ ಇದ್ದು, ನೆಗೆಟಿವ್‌ ವರದಿ ಅನುಸರಿಸದವರನ್ನು ನೋಡಲ್‌ ಅಧಿಕಾರಿಗಳ ಗಮನಕ್ಕೆ ತಂದು ನೆಗೆಟಿವ್‌ ವರದಿ ಸಿಗುವಲ್ಲಿವರೆಗೆ ಕ್ವಾರಂಟೈನ್‌ನಲ್ಲಿರಿಸಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಹಾಸ್ಟೆಲ್‌ಗಳು, ಬೋರ್ಡಿಂಗ್ ಅಥವಾ ವಸತಿ, ಶಿಕ್ಷಣ ಸಂಸ್ಥೆಗಳಲ್ಲಿ ಐದು ಅಥವಾ ಹೆಚ್ಚಿನ ಪ್ರಕರಣಗಳು ಇದ್ದರೆ, ಅಂತಹ ಸ್ಥಳಗಳನ್ನು ಸ್ಥಳೀಯ ಆರೋಗ್ಯ ಅಧಿಕಾರಿಗಳು ‘ಕಂಟೈನ್‌ಮೆಂಟ್ ವಲಯಗಳು’ ಎಂದು ಘೋಷಿಸುತ್ತಾರೆ ಮತ್ತು ವಿಶೇಷ ಕಣ್ಗಾವಲು ಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಕಂಟೈನ್‌ಮೆಂಟ್‌ ಝೋನ್‌ ಎಂದು ಘೋಷಿಸಿದ ಏಳು ದಿನಗಳ ಬಳಿಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್‌ ಮರು ಪರೀಕ್ಷೆ ನಡೆಸಲಾಗುವುದು.

ಫೇಸ್‌‌ ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಕೈಗಳಿಗೆ ಸ್ಯಾನಿಟೈಸರ್ಗಳ ಬಳಕೆಯನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದ್ದು, ನಿರ್ಲಕ್ಷ್ಯಗಳಿಗೆ ಹಾಸ್ಟೆಲ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹೊಣೆಯಾಗುತ್ತಾರೆ.

ಕೋವಿಡ್‌ ನೋಡಲ್‌ ಅಧಿಕಾರಿಗಳ ಅನುಮತಿಯಿಲ್ಲದೆ ಹಾಸ್ಟೆಲ್‌ ಹಾಗೂ ಕಾಲೇಜುಗಳಿಗೆ ಸಂದರ್ಶಕರ, ಸಂಬಂಧಿಕರ ಭೇಟಿಗೆ ಅವಕಾಶ ನೀಡದಂತೆ ಸರ್ಕಾರ ಹೇಳಿದೆ.

ಹಾಸ್ಟೆಲ್‌ಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳು

ವಿದ್ಯಾರ್ಥಿಗಳು ಪ್ರತ್ಯೇಕ ಕೋಣೆಗಳಲ್ಲಿ ಇರಬೇಕು. ಊಟಮಾಡುವ ಪ್ರದೇಶಗಳಲ್ಲಿ ಜನಸಂದಣಿ ಕಡಿಮೆ ಇರಬೇಕು, ಕಾಯುವ ಸಭಾಂಗಣಗಳು, ಓದುವ ಕೋಣೆಗಳು, ಆಟದ ಪ್ರದೇಶಗಳು, ಜಿಮ್ನಾಷಿಯಂ ಮುಂತಾದ ಕಡೆಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸೋಂಕಿನ ಹರಡುವಿಕೆಗೆ ಅವಕಾಶ ಮಾಡಕೂಡದು.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com