ಬ್ಯಾಟರಿ ಚಾಲಿತ ವಾಹನಗಳಿಗೆ ಬೆಂಬಲ; ಅಪಾರ್ಟ್‌ಮೆಂಟ್‌ಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಕಡ್ಡಾಯ!

ಎಲ್ಲಾ ಅಪಾರ್ಟ್‌ಮೆಂಟ್‌ಗಳು ಮತ್ತು ದೊಡ್ಡ ಕಟ್ಟಡಗಳಲ್ಲಿ ಇದನ್ನು ಜಾರಿಗೆ ತರಲು ಸರ್ಕಾರ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ತಿಳಿಸಿದ್ದಾರೆ.
ಬ್ಯಾಟರಿ ಚಾಲಿತ ವಾಹನಗಳಿಗೆ ಬೆಂಬಲ; ಅಪಾರ್ಟ್‌ಮೆಂಟ್‌ಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಕಡ್ಡಾಯ!

ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚು ಉತ್ತೇಜಿಸುವ ಸಲುವಾಗಿ ಎಲ್ಲಾ ಅಪಾರ್ಟ್‌ಮೆಂಟ್‌ಗಳು ಮತ್ತು ದೊಡ್ಡ ಕಟ್ಟಡಗಳು ತಮ್ಮ ಆವರಣದಲ್ಲಿ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸೌಲಭ್ಯಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ರಾಜ್ಯ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.

ಎಲ್ಲಾ ಅಪಾರ್ಟ್‌ಮೆಂಟ್‌ಗಳು ಮತ್ತು ದೊಡ್ಡ ಕಟ್ಟಡಗಳಲ್ಲಿ ಇದನ್ನು ಜಾರಿಗೆ ತರಲು ಸರ್ಕಾರ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಎಲೆಕ್ಟ್ರಿಕ್‌ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್‌ ಇಂಡಿಯಾ ಕಾನ್ಫರೆನ್ಸ್‌ ವತಿಯಿಂದ ಏರ್ಪಡಿಸಲಾಗಿದ್ದ 'ಭವಿಷ್ಯದತ್ತ ಸುಸ್ಥಿರ ಸಾರಿಗೆ' ವರ್ಚುವಲ್ ಗೋಷ್ಟಿಯಲ್ಲಿ ಭಾಗವಹಿಸಿ, ಮಾತನಾಡಿದ ಅವರು, “ಎಲೆಕ್ಟ್ರಿಕ್ ವಾಹನವನ್ನು ಒದಗಿಸುವುದರಷ್ಟೇ ಸಾಕಾಗುವುದಿಲ್ಲ , ನಾವು ಅದಕ್ಕೆ ಎಲ್ಲಾ ಸ್ಥಳಗಳಲ್ಲಿ ಸುಲಭವಾಗಿ ಚಾರ್ಜಿಂಗ್ ಆಯ್ಕೆಗಳನ್ನು ಒದಗಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಬ್ಯಾಟರಿ ಚಾಲಿತ ವಾಹನಗಳು ಮಾರುಕಟ್ಟೆಗೆ ಬರುತ್ತವೆ ಮತ್ತು ವಾಹನ ಚಾಲಕರು ಬ್ಯಾಟರಿಗಳನ್ನು ಬಾಡಿಗೆಗೆ ತೆಗೆದುಕೊಂಡು ಆ ವಾಹನಗಳನ್ನು ಓಡಿಸಬಹುದು. ಶೀಘ್ರದಲ್ಲೇ, ಪೆಟ್ರೋಲ್ ಬಂಕ್‌ಗಳ ಶೈಲಿಯಲ್ಲಿ ಬ್ಯಾಟರಿ ಬಂಕ್‌ಗಳು ಬರಲಿವೆ. ಇದು ಎಲೆಕ್ಟ್ರಿಕ್ ವಾಹನಗಳ ಬೆಲೆಯನ್ನು ತಗ್ಗಿಸುವುದಲ್ಲದೆ ವಾಹನ ಚಾಲಕರಿಗೆ ವ್ಯಾಪಕವಾದ ಆಯ್ಕೆಗಳನ್ನು ಒದಗಿಸುತ್ತದೆ” ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ತಡೆಯುವ ಏಕೈಕ ಮಾರ್ಗವೆಂದರೆ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಯಿಸುವುದು ಎಂದು ಸೂಚಿಸಿದ ಅವರು, ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಸರ್ಕಾರ ಎಲ್ಲಾ ಸಬ್ಸಿಡಿಗಳನ್ನು ನೀಡಿದೆ ಎಂದು ತಿಳಿಸಿದ್ದಾರೆ.

"ವಿದ್ಯುತ್ ದರಕ್ಕೆ ರಿಯಾಯಿತಿ, ಎಲೆಕ್ಟ್ರಿಕ್ ವಾಹನಗಳು ಮತ್ತು ಬಿಡಿಭಾಗಗಳ ಮೇಲಿನ ಸಬ್ಸಿಡಿಗಳನ್ನು ಈಗಾಗಲೇ ಒದಗಿಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಹೊರತರುವ ಮೂಲಕ ಕರ್ನಾಟಕವು ಮುಂಚೂಣಿಯಲ್ಲಿದೆ ”ಎಂದು ಡಾ.ಅಶ್ವತ್ ನಾರಾಯಣ್ ಹೇಳಿದ್ದಾರೆ.

ಕರ್ನಾಟಕದಲ್ಲಿ ವಿದ್ಯುತ್ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ ನಾರಾಯಣ್, ಇವಿಗಳಿಗೆ ವಿದ್ಯುತ್ ಈಗ ಮತ್ತು ಭವಿಷ್ಯದಲ್ಲಿಯೂ ವಾಣಿಜ್ಯ ಸುಂಕಕ್ಕಿಂತ ಕಡಿಮೆ ಶುಲ್ಕ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ಇವಿ ಉತ್ಪಾದನೆ ಮತ್ತು ಉತ್ಪಾದನಾ ವಲಯದ ಹೂಡಿಕೆದಾರರಿಗೆ ಬೆಂಬಲ ಮತ್ತು ಎಲ್ಲಾ ಸಹಾಯವನ್ನೂ ನೀಡಲಾಗುವುದು. ಎಲೆಕ್ಟ್ರಿಕ್‌ ವಾಹನ ತಯಾರಿಕೆ ಹಾಗೂ ಅದಕ್ಕೆ ಪೂರಕವಾದ ಕೈಗಾರಿಕೆಗಳನ್ನು ಸ್ಥಾಪನೆಗೆ ಸರಕಾರ ಹೆಚ್ಚು ಬೆಂಬಲ ನೀಡುತ್ತಿದೆ. ಈಗಾಗಲೇ ರಾಜ್ಯದಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿ ಕೈಗಾರಿಕೆಗಳು ಸ್ಥಾಪನೆಯಾಗುತ್ತಿವೆ ಎಂದ ಅವರು, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಕರ್ನಾಟಕವು ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಹೇಳಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com