ದೇಶದಲ್ಲಿ ಕರೋನಾ ಲಸಿಕೆ ಉಚಿತವಾಗಿ ನೀಡುವಂತೆ ಕೋರಿ ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ

ಕೋವಿಡ್ ಚಿಕಿತ್ಸೆ ಮತ್ತು ಲಸಿಕೆ ನಿಯಂತ್ರಣಕ್ಕಾಗಿಯೇ ಪಿ.ಎಂ ಕೇರ್ಸ್ ನಿಧಿಗೆ ಕೇಂದ್ರ ಸರ್ಕಾರ ಹಣ ಸಂಗ್ರಹಿಸಿದೆ. ಆ ನಿಧಿಯನ್ನು ಕೋವಿಡ್ ಲಸಿಕೆಯ ಉಚಿತ ವಿತರಣೆಗೆ ಬಳಸಬೇಕೆಂದು ಮೋದಿ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರಬರೆದಿದ್ದಾರೆ.
ದೇಶದಲ್ಲಿ ಕರೋನಾ ಲಸಿಕೆ ಉಚಿತವಾಗಿ ನೀಡುವಂತೆ ಕೋರಿ ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ

ಕರೋನಾ ಸೋಂಕಿನಿಂದ ಸಾಮಾನ್ಯ ಜನರ ಬದುಕು ನಲುಗಿ ಹೋಗಿದ್ದು, ಜನ ಸಾಮಾನ್ಯರ ಸಮಸ್ಯೆ ಹೇಳತೀರದು. ಭಾರತದಲ್ಲಿ ಎರಡು ಲಸಿಕೆಗಳನ್ನು ಸಂಶೋಧಿಸಿ ಸರ್ವಾಜನಿಕ ಬಳಕೆಗೆ ಅನುಮತಿ ನೀಡಲಾಗಿದೆ. ಇದೀಗ ಪ್ರಪಂಚದಲ್ಲಿ ಕರೋನಾ ಎರಡನೇಯ ಅಲೆ ಶುರುವಾಗಿದೆ. ಕೇಂದ್ರದ ಮೋದಿ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡಿಕೆಯ ಕುರಿತು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೆರಡರಲ್ಲಿಯೂ ಕೋವಿಡ್ ಲಸಿಕೆಯನ್ನು ಉಚಿತವಾಗಿ‌ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ವ್ಯವಸ್ಥೆ ಕಲ್ಪಿಸಬೇಕು. ಕೋವಿಡ್ ಚಿಕಿತ್ಸೆ ಮತ್ತು ಲಸಿಕೆ ನಿಯಂತ್ರಣಕ್ಕಾಗಿಯೇ ಪಿ.ಎಂ ಕೇರ್ಸ್ ನಿಧಿಗೆ ಕೇಂದ್ರ ಸರ್ಕಾರ ಹಣ ಸಂಗ್ರಹಿಸಿದೆ. ಆ ನಿಧಿಯನ್ನು ಕೋವಿಡ್ ಲಸಿಕೆಯ ಉಚಿತ ವಿತರಣೆಗೆ ಬಳಸಬೇಕೆಂದು ಮೋದಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಕೋವಿಡ್ ಲಸಿಕೆಗೆ ರೂ.250 ಶುಲ್ಕ ನಿಗದಿಪಡಿಸಿರುವುದರಿಂದಾಗಿ ಶೇಕಡಾ 70 ರಷ್ಟಿರುವ ಬಡಜನತೆ ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ. ಇದರಿಂದಾಗಿ‌ ಕೋವಿಡ್ ವಿರುದ್ಧದ ಸಮರಕ್ಕೆ ಹಿನ್ನಡೆಯಾಗಿದೆ ಎಂದು ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈಗಾಗಲೇ ಭಾರತ ಎರಡು ಬಗೆಯ ಕೋವಿಡ್ ಲಸಿಕೆಗಳನ್ನು ಕಂಡು ಹಿಡಿದಿದ್ದರೂ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ದೇಶದಲ್ಲಿ ಇಲ್ಲಿನ ವರೆಗೆ ಶೇಕಡ 0.5 ರಷ್ಟು ಜನಸಂಖ್ಯೆಗಷ್ಟೆ ಲಸಿಕೆ ನೀಡಿರುವುದು ವಿಷಾದನೀಯ ಬೆಳವಣಿಗೆ ಎಂದು ಪತ್ರದ ಮೂಲಕ ಅಸಮಧಾನ ಹೊರಹಾಕಿದ ಅವರು ಇಸ್ರೇಲ್ ಶೇಕಡಾ 36, ಅಮೆರಿಕಾ ಶೇಕಡಾ 6, ಇಂಗ್ಲೆಂಡ್‌ ಶೇಕಡಾ 4 ರಷ್ಟು ಜನಸಂಖ್ಯೆಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗಿದೆ. ಭಾರತದಲ್ಲಿಯೂ ಉಚಿತವಾಗಿ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಕರೋನಾ ಸೋಂಕು ಎರಡನೇ ಅಲೆ ಹೆಚ್ಚು ಉಲ್ಭಣಗೊಳ್ಳುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿದರೆ ಅನಾಹುತಕ್ಕೆ ದಾರಿ ಮಾಡಿಕೊಟ್ಟಂತೆ ಕೇಂದ್ರ ಸರ್ಕಾರ ಎಚ್ಚರವಹಿಸ ಬೇಕೆಂದು ಸಲಹೆ ನೀಡಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com