ದೇವೆಗೌಡರು ಯಾರನ್ನು ಬೆಳೆಸಿದ್ದಾರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ –HD ಕುಮಾರಸ್ವಾಮಿ

ಧಿಕಾರ ಉಂಡು ಬೆನ್ನಿಗೆ ಚೂರಿ ಹಾಕುವುದು ಹೊಸದೇನಲ್ಲ. ಯಾರು ಹೋಗಲಿ ಬಿಡಲಿ ಪಕ್ಷಕ್ಕೇನು ನಷ್ಟವಿಲ್ಲ. ಅವರಿಗೆ ಲಾಭ ಆಗುತ್ತೆ ಎಂದು ಶಿಸ್ತು ಕ್ರಮ ಕೈಗೊಂಡಿಲ್ಲ. ದೇವೆಗೌಡರ ಕುಟುಂಬಕ್ಕೆ ಇದೇನು ಹೊಸದೇನಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ದೇವೆಗೌಡರು ಯಾರನ್ನು ಬೆಳೆಸಿದ್ದಾರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ –HD ಕುಮಾರಸ್ವಾಮಿ
ದೇವೆಗೌಡರು ಯಾರನ್ನು ಬೆಳೆಸಿದ್ದಾರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ –HD ಕುಮಾರಸ್ವಾಮಿ
ಪಕ್ಷದ ಹೆಸರಿನಿಂದ ಜಾತ್ಯಾತೀತ ಪದ ತೆಗೆಯುವಂತೆ ಕುಮಾರಸ್ವಾಮಿಗೆ ಚೇತನ್‌ ಸವಾಲು

ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್‌ ರಾಜ್ಯಧ್ಯಕ್ಷ ಹೆಚ್‌ ಡಿ ಕುಮಾರಸ್ವಾಮಿ, ದೇವೆಗೌಡರು ಯಾರನ್ನು ಬೆಳೆಸಿದ್ದಾರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಇದೇನು ಹೊಸದಲ್ಲ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ʼಜೆಡಿಎಸ್‌ ಬಾಗಿಲು ತೆರೆದಿದೆ, ಹೋಗೋರು ಹೋಗಬಹುದು, ಬರೋರು ಬರಬಹುದು. ಹಳಬರು ಹೋದರೆ ಹೊಸಬರು ಬರುತ್ತಾರೆ. ಪಕ್ಷ ಬಿಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಧು ಬಂಗಾರಪ್ಪ ಪಕ್ಷ ತೊರೆಯುವುದು ಹಳೆಯ ವಿಚಾರ‌. ಅಧಿಕಾರ ಉಂಡು ಬೆನ್ನಿಗೆ ಚೂರಿ ಹಾಕುವುದು ಹೊಸದೇನಲ್ಲ. ಯಾರು ಹೋಗಲಿ ಬಿಡಲಿ ಪಕ್ಷಕ್ಕೇನು ನಷ್ಟವಿಲ್ಲ. ಅವರಿಗೆ ಲಾಭ ಆಗುತ್ತೆ ಎಂದು ಶಿಸ್ತು ಕ್ರಮ ಕೈಗೊಂಡಿಲ್ಲ. ದೇವೆಗೌಡರ ಕುಟುಂಬಕ್ಕೆ ಇದೇನು ಹೊಸದೇನಲ್ಲ. ದೇವೆಗೌಡರು ಯಾರನ್ನು ಬೆಳೆಸಿದ್ದಾರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಮಾಜಿ ಶಾಸಕರಾಗಿರುವ ಮಧು ಬಂಗಾರಪ್ಪ, ಗುರುವಾರ ಸಿಧ್ದರಾಮಯ್ಯ ಅವರ ನಿವಾಸದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆಂದು ಮೂಲಗಳು ತಿಳಿಸಿವೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com