ಮಹಾರಾಷ್ಟ್ರದಲ್ಲಿ ಕರೋನಾ ಏರಿಕೆ: ಆತಂಕ ವ್ಯಕ್ತಪಡಿಸಿದ ಸಚಿವ ಸುಧಾಕರ್

ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಸಚಿವ ಸುಧಾಕರ್‌ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕರೋನಾ ಏರಿಕೆ: ಆತಂಕ ವ್ಯಕ್ತಪಡಿಸಿದ ಸಚಿವ ಸುಧಾಕರ್

ಮಹಾರಾಷ್ಟ್ರದಲ್ಲಿ ಕರೋನಾ ಸಂಖ್ಯೆ ವಿಪರೀತ ಏರುತ್ತಿರುವುದು ಕರ್ನಾಟಕದ ಆತಂಕಕ್ಕೂ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌, ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಸಚಿವ ಸುಧಾಕರ್‌ ಮನವಿ ಮಾಡಿದ್ದಾರೆ.

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ ಎಂದು ಅವರು ಕರೆ ನೀಡಿದ್ದಾರೆ.

ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಸುಧಾಕರ್‌ ಮನವಿ ಮಾಡಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com