ರಾಜ್ಯದಲ್ಲಿ ಹೆಚ್ಚಿದ ಕರೋನಾ ಸೋಂಕು: ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಮದುವೆ, ಧಾರ್ಮಿಕ, ರಾಜಕೀಯ ಸಮಾರಂಭ, ಶವಸಂಸ್ಕಾರ ಸೇರಿದಂತೆ ಇತರೆ ಆಚರಣೆಗಳಿಗೆ ಇಷ್ಟೇ ಜನ ಸೇರ ಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಹೆಚ್ಚಿದ ಕರೋನಾ ಸೋಂಕು: ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ರಾಜ್ಯದಲ್ಲಿ ದಿನೇ-ದಿನೇ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ನಿಯಮವಾಳಿಗಳ ಮಾರ್ಗಸೂಚಿಯನ್ನು ಬಿಡುಗಡೆಮಾಡಿದೆ.

ಮಾರ್ಗ ಸೂಚಿಯಲ್ಲಿರುವ ಅಂಶಗಳು

ಸೋಂಕಿನ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಿರುವ ಜಿಲ್ಲೆಗಳಲ್ಲಿ ಪರೀಕ್ಷಾ ಪ್ರಮಾಣವನ್ನು ಪರಿಷ್ಕರಿಸಲಾಗಿದೆ. ಬೆಳಗಾವಿ -3000, ಬೆಂಗಳೂರು ನಗರ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ -40000, ದಕ್ಷಿಣ ಕನ್ನಡ - 3000, ಮೈಸೂರು -5000, ಕೊಡಗು -1000, ಉಡುಪಿ -2000, ತುಮಕೂರು -35000 ಮತ್ತು ವಿಜಯಪುರದಲ್ಲಿ -2000 ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ತುಮಕೂರು, ಬೀದರ್‌, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ದೈನಂದಿನ ಪರೀಕ್ಷಾ ಗುರಿಯನ್ನು ತಲುಪಲು ಪೂರ್ಣ ಪ್ರಮಾಣದಲ್ಲಿ ಪರೀಕ್ಷೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳ ಬೇಕೆಂದು ತಿಳಿಸಲಾಗಿದೆ. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಆರ್‌ಟಿ - ಪಿಸಿಆರ್‌ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವುದಾಗಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಬೀದರ್‌, ಬೆಂಗಳೂರು ಗ್ರಾಮಾಂತರ ಮತ್ತು ನಗರದಲ್ಲಿ ಸೋಂಕು ಸಂಪರ್ಕಿತರ ಪತ್ತೆ ಹಚ್ಚುವ ಪ್ರಕ್ರಿಯೆಯೂ 1:20 ರ ಪ್ರಮಾಣದಲ್ಲಿರಬೇಕೆಂದು ಹೇಳಿದೆ. ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ, ಜೊತೆಗೆ ಕೋವಿಡ್‌ ಲಸಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸೂಕ್ತ ಸಲಹೆ ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ಮತ್ತು ಇತರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಮದುವೆ, ಧಾರ್ಮಿಕ, ರಾಜಕೀಯ ಸಮಾರಂಭ, ಶವಸಂಸ್ಕಾರ ಸೇರಿದಂತೆ ಇತರೆ ಆಚರಣೆಗಳಿಗೆ ಇಷ್ಟೇ ಜನ ಸೇರಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಗುಂಪುಸೇರುವುದಕ್ಕೂ ನಿರ್ಬಂಧ ಹೇರಲಾಗಿದೆ. ಹೆಚ್ಚು ಪ್ರಕರಣ ದಾಖಲಾಗುತ್ತಿರುವ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ಆರ್‌ಟಿ - ಪಿಸಿಆರ್‌ ನೆಗೆಟಿವ್‌ ಪರೀಕ್ಷಾ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ. ಹಾಗೆಯೇ ಗಡಿಭಾಗಗಳಲ್ಲಿ ಪರೀಕ್ಷಾ ವರದಿಯ ಪರಿಶೀಲನೆ ತೀವ್ರಗೊಳಿಸುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಮಾಣವು ಹೆಚ್ಚಾಗುತ್ತಿದ್ದು, ಜನರು ಎಚ್ಚರಿಕೆಯಿಂದಿರಬೇಕು. ಸರ್ಕಾರದ ನಿಯಮಾವಳಿಗಳನ್ನು ಪಾಲಿಸಬೇಕು ಜೊತೆಗೆ ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಎರಡನೇ ಕೊರೋನಾ ಅಬ್ಬರ ಪ್ರಮಾಣ ಹೆಚ್ಚುತ್ತಿದ್ದು, ಗುರುವಾರದ ವೇಳೆಗೆ 783 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 9,57,584ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯಇಲಾಖೆ ವರದಿ ಮಾಡಿದೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com