ಚಿತ್ರಮಂದಿರಗಳಿಗೆ ಯಾವುದೇ ನಿರ್ಬಂಧವಿಲ್ಲ ಸಿಎಂ ಬಿಎಸ್‌ ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಕರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಚಿತ್ರಮಂದಿರಗಳಿಗೆ ಯಾವುದೇ ನಿರ್ಬಂಧವಿಲ್ಲ ಸಿಎಂ ಬಿಎಸ್‌ ಯಡಿಯೂರಪ್ಪ ಸ್ಪಷ್ಟನೆ

ದೇಶದಲ್ಲಿ ಇತ್ತೀಚೆಗೆ ಕರೋನಾ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಕರೋನಾ ಎರಡನೇ ಅಲೆಯ ಬಗ್ಗೆ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದು ರಾಜ್ಯದ ಜನರಲ್ಲಿ ಮತ್ತೆ ಲಾಕ್‌ಡೌನ್‌ ಆಗುತ್ತಾ..?ಎಂಬ ಆತಂಕಕ್ಕೆ ಕಾರಣವಾಗಿತ್ತು. ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ನೈಟ್‌ಕರ್ಫ್ಯೂ ಮತ್ತು ಲಾಕ್‌ಡೌನ್‌ ಜಾರಿ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಚಿತ್ರಮಂದಿರಗಳಲ್ಲಿಯೂ ಪ್ರೇಕ್ಷಕರಿಗೆ ನಿರ್ಬಂಧವಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

ಚಿತ್ರಮಂದಿರಗಳಿಗೆ ಯಾವುದೇ ನಿರ್ಬಂಧವಿಲ್ಲ ಸಿಎಂ ಬಿಎಸ್‌ ಯಡಿಯೂರಪ್ಪ ಸ್ಪಷ್ಟನೆ
ಲಾಕ್‌ಡೌನ್‌, ನೈಟ್‌ ಕರ್ಫ್ಯೂ ಜಾರಿ ಮಾಡಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಕರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಧಾರ್ಮಿಕ ಸಮಾರಂಭಗಳಿಗೆ, ಶವಸಂಸ್ಕಾರ, ಮದುವೆ ಇತರೆ ಕಾರ್ಯಕ್ರಮಗಳಿಗೆ ಇಂತಿಷ್ಟೇ ಜನ ಸೇರುವಂತೆ ಮಾರ್ಗ ಸೂಚಿಯಲ್ಲಿ ತಿಳಿಸಲಾಗಿದೆ. ತಪ್ಪದೇ ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಆರೋಗ್ಯದ ಬಗ್ಗೆ ಕಾಳಜಿ, ಸ್ವಚ್ಚತೆ ಕಾಪಾಡಿಕೊಳ್ಳಬೇಕು ಹಾಗೂ ಸರ್ಕಾರದ ಮಾರ್ಗಸೂಚಿಯಲ್ಲಿನ ನಿಯಮಗಳನ್ನು ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ.

ಚಿತ್ರಮಂದಿರಗಳಿಗೆ ಯಾವುದೇ ನಿರ್ಬಂಧವಿಲ್ಲ ಸಿಎಂ ಬಿಎಸ್‌ ಯಡಿಯೂರಪ್ಪ ಸ್ಪಷ್ಟನೆ
ರಾಜ್ಯದಲ್ಲಿ ಹೆಚ್ಚಿದ ಕರೋನಾ ಸೋಂಕು: ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com