ಕೋವಿಡ್‌ಗೆ ಲಸಿಕೆ ಬಂದಿದೆ, ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಎಲ್ಲಿಂದ ಲಸಿಕೆ ತರುವುದು? - ಸಿದ್ದರಾಮಯ್ಯ

ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಮುಖ್ಯಮಂತ್ರಿಗಳು ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ ಎಂದು ಒತ್ತಾಯಿಸಿದ್ದಾರೆ.
ಕೋವಿಡ್‌ಗೆ ಲಸಿಕೆ ಬಂದಿದೆ, ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಎಲ್ಲಿಂದ ಲಸಿಕೆ ತರುವುದು? - ಸಿದ್ದರಾಮಯ್ಯ

ಕರೋನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕರೋನಾ ವೈರಸ್. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕರೋನಾ ಸೋಂಕು ಉಲ್ಬಣಗೊಳ್ಳುತ್ತಿದೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕರೋನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಯಡಿಯೂರಪ್ಪ ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕರೋನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ? ಎಂದು ಕೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರೋನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಮುಖ್ಯಮಂತ್ರಿಗಳು ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ ಎಂದು ಒತ್ತಾಯಿಸಿದ್ದಾರೆ.

ಕರೋನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕರೋನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕರೋನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸರ್ಕಾರಕ್ಕೆ ಖಡಕ್ ಉತ್ತರಕೊಟ್ಟಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com