ಮಾರ್ಚ್‌ 22ರಂದು ಸಂಯುಕ್ತ ಹೋರಾಟ – ಕರ್ನಾಟಕ ವತಿಯಿಂದ ಬೃಹತ್‌ ವಿಧಾನಸೌಧ ಚಲೋ ರ‍್ಯಾಲಿ

ಸಂಯುಕ್ತ ಕಿಸಾನ್‌ ಮೋರ್ಚಾ ಮಾರ್ಚ್‌ 26ರಂದು ಕರೆ ನೀಡಿರುವ ಭಾರತ್‌ ಬಂದ್‌ಗೆ ಕರ್ನಾಟಕದಲ್ಲಿ ಯಾವ ರೀತಿ ಪ್ರತಿಭಟನೆ ನಡೆಯಲಿದೆ ಎಂಬ ಕುರಿತಾಗಿ ಕೂಡಾ ಮಾರ್ಚ್‌ 22ರಂದು ರೈತ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ.
ಮಾರ್ಚ್‌ 22ರಂದು ಸಂಯುಕ್ತ ಹೋರಾಟ – ಕರ್ನಾಟಕ ವತಿಯಿಂದ ಬೃಹತ್‌ ವಿಧಾನಸೌಧ ಚಲೋ ರ‍್ಯಾಲಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ರೈತರ, ದಲಿತರ, ಕಾರ್ಮಿಕರ, ವಿದ್ಯಾರ್ಥಿಗಳ, ಯುವಜನರ ಮತ್ತು ಮಹಿಳೆಯರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಮಾರ್ಚ್‌ 22 ರಂದು ಬೃಹತ್‌ ವಿಧಾನಸೌದ ಚಲೋʼ ರ‍್ಯಾಲಿ ಆಯೋಜಿಸಲಾಗಿದೆ. ಸಂಯುಕ್ತ ಹೋರಾಟ – ಕರ್ನಾಟಕ ವತಿಯಿಂದ ಈ ರ‍್ಯಾಲಿಯನ್ನು ಆಯೋಜಿಸಲಾಗಿದ್ದು, ಕರ್ನಾಟಕದ ಪ್ರತೀ ಜಿಲ್ಲೆಗಳಿಂದ ಸಾವಿರಾರು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಮಾರ್ಚ್‌ 22ರಂದು ಬೆಳಗ್ಗೆ 11 ಗಂಟೆಗೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರ‍್ಯಾಲಿ ಆರಂಭವಾಗಲಿದೆ. ನಂತರ ಮಧ್ಯಾಹ್ನ 1 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಬಹಿರಂಗ ಸಭೆ ನಡೆಯಲಿದೆ, ಎಂದು ಪತ್ರಿಕಾಗೋಷ್ಟಿಯಲ್ಲಿ ಸಂಯುಕ್ತ ಹೋರಾಟದ ಮುಖಂಡರು ಹೇಳಿದ್ದರು.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಾರ್ಚ್‌ 26ರಂದು ಭಾರತ್‌ ಬಂದ್‌:

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮಾರ್ಚ್‌ 26ರಂದು ನಾಲ್ಕು ತಿಂಗಳು ತುಂಬಲಿವೆ. ಈ ಸಂದರ್ಭದಲ್ಲಿ ಕೇಂದ್ರದ ಅಪ್ರಮಾಣಿಕತೆಯನ್ನು ಖಂಡಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಭಾರತ್‌ ಬಂದ್‌ಗೆ ಕರೆ ನೀಡಿದೆ.

ಈ ಬಂದ್‌ಗೆ ಕರ್ನಾಟಕದಲ್ಲಿ ಯಾವ ರೀತಿ ಪ್ರತಿಕ್ರಿಯೆ ನೀಡಬೇಕೆಂಬ ಕುರಿತು ಕೂಡಾ ಮಾರ್ಚ್‌ 22ರ ವಿಧಾನಸೌಧ ಚಲೋ ರ‍್ಯಾಲಿಯ ವೇಳೆ ತೀರ್ಮಾನಿಸಲಾಗುವುದು ಎಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಲಾಗಿದೆ.

ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ ಸಿ ಬಯ್ಯಾರೆಡ್ಡಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com