ಕರ್ನಾಟಕ: ಕರೋನಾದಿಂದಾಗಿ ಕೆಲಸ ಕಳೆದುಕೊಂಡ ಲಕ್ಷಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು

ಅಡಚಣೆಗಳ ನಡುವೆಯೂ, 396 ಗಾರ್ಮೆಂಟ್‌ ಫ್ಯಾಕ್ಟರಿಗಳಿಗೆ ನೋಟೀಸ್‌ ಜಾರಿ ಮಾಡಲಾಗಿದೆ, ಎಂದು ಕಾರ್ಮಿಕ ಸಚಿವರು ಹೇಳಿದ್ದಾರೆ.
ಕರ್ನಾಟಕ: ಕರೋನಾದಿಂದಾಗಿ ಕೆಲಸ ಕಳೆದುಕೊಂಡ ಲಕ್ಷಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು

ಕರೋನಾ ಪ್ರೇರಿತ ಲಾಕ್‌ಡೌನ್‌ ನಿಜಕ್ಕೂ ದೇಶದ ಬಡ ಜನರ ಬದುಕಲ್ಲಿ ಮರೆಯಲಾಗದ ಕಹಿ ಅನುಭವ ನೀಡಿದೆ. ಲಕ್ಷಾಂತರ ಜನರು ಕೆಲಸ ಕಳೆದುಕೊಂಡು ಬೀದಿಗೆ ಬೀಳುವ ಪರಿಸ್ಥಿತಿಗೆ ತಲುಪಿದ್ದಾರೆ. ಕರ್ನಾಟಕದಲ್ಲಿಯೂ ಒಂದು ಲಕ್ಷಕ್ಕೂ ಹೆಚ್ಚು ಮಹಿಳೆಯರು ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿದ್ದಾರೆ ಎಂಬ ಕಟು ಸತ್ಯವನ್ನು ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ್‌ ಅವರು ಸದನದಲ್ಲಿ ತಿಳಿಸಿದ್ದಾರೆ.

ತಿಪಟೂರಿನ ಶಾಸಕರಾದ ನಾಗೇಶ್‌ ಅವರು ಪ್ರಶ್ನೋತ್ತರ ವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಶಿವರಾಂ ಹೆಬ್ಬಾರ್‌ ಅವರು, 983 ಗಾರ್ಮೆಂಟ್‌ ಫ್ಯಾಕ್ಟರಿಗಳಲ್ಲಿ 2,86,747 ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದರು. ಎಂದು ತಿಳಿಸಿದ್ದಾರೆ. ಹಲವು ಗಾರ್ಮೆಂಟ್‌ ಫ್ಯಾಕ್ಟರಿಗಲು ಲಾಕ್‌ಡೌನ್‌ನಿಂದಾಗಿ ಮುಚ್ಚಿಹೋಗಿದ್ದರಿಂದ ಲಕ್ಷಕ್ಕೂ ಹೆಚ್ಚು ಕಾರ್ಮಿಕ ಮಹಿಳೆಯರು ಕೆಲಸ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಗಾರ್ಮೆಂಟ್‌ ಫ್ಯಾಕ್ಟರಿಗಳಲ್ಲಿ ಮಹಿಳಾ ಸಬಲಿಕರಣಕ್ಕಾಗಿ ಹಲವು ನಿಯಮಗಳನ್ನು ರೂಪಿಸಲಾಗಿದೆ. ಆದರೆ, ಅವುಗಲ ಪಾಲನೆಯಾಗುತ್ತಿಲ್ಲ. ಕ್ಯಾಂಟೀನ್‌, ಆಂಬುಲೆನ್ಸ್‌, ವೇತನ ಸಹಿತ ರಜೆ ಸೇರಿದಂತೆ ಇತರ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ, ಎಂದು ನಾಗೇಶ್‌ ಅವರು ಹೇಳಿದ್ದರು.

ಇದಕ್ಕೆ ಉತ್ತರಿಸಿದ ಕಾರ್ಮಿಕ ಸಚಿವರು, ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದ ಕಾರಣ ನಿಯಮಾವಳಿಗಳ ಪಾಲನೆಯಾಗುತ್ತಿದೆಯೇ ಇಲ್ಲವೇ ಎಂಬುದರ ಕುರಿತು ಗಮನ ಹರಿಸಲು ಸಾಧ್ಯವಾಗಲಿಲ್ಲ ಎಂಬ ಅಂಶವನ್ನು ಒಪ್ಪಿಕೊಂಡಿದ್ದಾರೆ.

“ಇಷ್ಟೆಲ್ಲಾ ಅಡಚಣೆಗಳ ನಡುವೆಯೂ, 396 ಗಾರ್ಮೆಂಟ್‌ ಫ್ಯಾಕ್ಟರಿಗಳಿಗೆ ನೋಟೀಸ್‌ ಜಾರಿ ಮಾಡಲಾಗಿದೆ. ಸಿಬ್ಬಂದಿ ಕೊರತೆಯ ಕುರಿತಾಗಿ ಸರ್ಕಾರಕ್ಕೆ ಪತ್ರವನ್ನು ಕೂಡಾ ಬರೆಯಲಾಗುವುದು,” ಎಂದು ಶಿವರಾಂ ಹೆಬ್ಬಾರ್‌ ಅವರು ಹೇಳಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com