ಚುನಾವಣೆ ಅಂತ ಕರೋನಾ ಹೆದರಿ ಓಡುತ್ತಾ..? ಕಠಿಣ ನಿರ್ಬಂಧವಿಲ್ಲ ಎಂಬ ಸಿಎಂ ಹೇಳಿಕೆಗೆ ಹೆಚ್‌ಡಿಕೆ ತಿರುಗೇಟು

ಚುನಾವಣೆ ಅಂತ ಕರೋನಾ ಹೆದರಿ ಓಡುತ್ತಾ..? ಕಠಿಣ ನಿರ್ಬಂಧವಿಲ್ಲ ಎಂಬ ಸಿಎಂ ಹೇಳಿಕೆಗೆ ಹೆಚ್‌ಡಿಕೆ ತಿರುಗೇಟು

ಚುನಾವಣೆಗೆ ಕಠಿಣ ನಿಯಮಗಳು ಅನ್ವಯಿಸುವುದಿಲ್ಲ ಎಂಬ ಸಿಎಂ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚುನಾವಣೆ ಇದೆ ಅಂತ ಹೇಳಿ ಕರೋನಾ ಹೆದರಿ ಓಡುತ್ತಾ..? ಸರ್ಕಾರ ತಮ್ಮ ಅನುಕೂಲಕ್ಕಾಗಿ ಮಾಡಿಕೊಂಡ ನಿಯಮಾವಳಿಗಳು ಕರೋನಾ ತಡೆಗಟ್ಟುವುದಕ್ಕೆ ಅಸಾಹಯಕವಾಗಿದೆ ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಹಾಗು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್‌ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿದೆ. ಈ ಸಂಬಂಧ ಮಾರ್ಚ್‌20 ರಂದು ಮಾಧ್ಯಮಗಳಿಗೆ ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಎರಡು ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಸ್ಪರ್ಧೆ ಮಾಡುವುದಾಗಿ ನಿರ್ಣಯಿಸಲಾಗಿದೆ ಎಂದಿದ್ದಾರೆ.

ಮತ್ತೊಂದೆಡೆ ರಾಜ್ಯದಲ್ಲಿ ಕರೋನಾ ಪ್ರಕರಣಗಳು ಹೆಚ್ಚಾದ ಕಾರಣ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಟ್ಟುನಿಟ್ಟಿನ ಮಾರ್ಗ ಸೂಚಿಸಿ ಹೊರಡಿಸಿದೆ. ನಿಯಮ ಪಾಲಿಸದಿದ್ದರೆ ಕಠಿಣಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಚುನಾವಣೆ ಅಂತ ಕರೋನಾ ಹೆದರಿ ಓಡುತ್ತಾ..? ಕಠಿಣ ನಿರ್ಬಂಧವಿಲ್ಲ ಎಂಬ ಸಿಎಂ ಹೇಳಿಕೆಗೆ ಹೆಚ್‌ಡಿಕೆ ತಿರುಗೇಟು
ರಾಜ್ಯದಲ್ಲಿ ಹೆಚ್ಚಿದ ಕರೋನಾ ಸೋಂಕು: ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆದರೆ ಉಪಚುನಾವಣೆಗೆ ಕರೋನಾ ಕಠಿಣ ನಿಯಮಗಳು ಅನ್ವಯವಾಗುವುದಿಲ್ಲವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಹಿನ್ನಲೆ, ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚುನಾವಣೆಗೆ ಕರೋನಾ ಬರಲ್ವಾ..? ಚುನಾವಣೆಗೆ ಕಠಿಣ ನಿಯಮಗಳು ಅನ್ವಯಿಸುವುದಿಲ್ಲ ಎಂದು ರಾಜ್ಯಸರ್ಕಾರ ಹೇಳಿದೆ. ಚುನಾವಣೆ ಇದೆ ಅಂತ ಹೇಳಿ ಕರೋನಾ ಹೆದರಿ ಓಡುತ್ತಾ..? ಸರ್ಕಾರ ತಮ್ಮ ಅನುಕೂಲಕ್ಕಾಗಿ ಮಾಡಿಕೊಂಡ ನಿಯಮಾವಳಿಗಳು ಕರೋನಾ ತಡೆಗಟ್ಟುವುದಕ್ಕೆ ಅಸಾಹಯಕವಾಗಿದೆ ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com