ಬೆಳಗಾವಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸತೀಶ್‌ ಜಾರಕಿಹೊಳಿ ಆಯ್ಕೆ: ಪಕ್ಷದೊಳಗೆ ಭಿನ್ನಮತ ಸ್ಪೋಟ

ನಾವು ಪಕ್ಷದ ಹೈಕಮಾಂಡಿಗೆ ಸತೀಶ್‌ ಜಾರಕಿಹೊಳಿ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸತೀಶ್‌ ಜಾರಕಿಹೊಳಿ ಆಯ್ಕೆ: ಪಕ್ಷದೊಳಗೆ ಭಿನ್ನಮತ ಸ್ಪೋಟ

ಸುರೇಶ್‌ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕ್ಷೇತ್ರದ ಶಾಸಕರಾಗಿರುವ ಸತೀಶ್ ಜಾರಕಿಹೊಳಿಯವರನ್ನು ರಾಜ್ಯ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾವು ಪಕ್ಷದ ಹೈಕಮಾಂಡಿಗೆ ಸತೀಶ್‌ ಜಾರಕಿಹೊಳಿ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದಿಂದ ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಮನೆತನದ ಪ್ರಭಾವ ಇನ್ನೂ ಕುಗ್ಗಿಲ್ಲ ಎಂದು ಸಾಬೀತುಪಡಿಸಲು ಸತೀಶ್‌ ಜಾರಕಿಹೊಳಿಯವರನ್ನು ಕಣಕ್ಕಿಳಿಸಲಾಗುತ್ತಿದೆ ಎನ್ನಲಾಗಿದೆ.

ಎಪ್ರಿಲ್‌ 17 ಕ್ಕೆ ಉಪಚುನಾವಣೆ ನಡೆಯಲಿದ್ದು, ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸತೀಶ್‌ ಜಾರಕಿಹೊಳಿ ಒಪ್ಪಿಗೆ ನೀಡಿದ್ದಾರೆ.

ಅಸಮಾಧಾನ ಸ್ಪೋಟ:

ಬೆಳಗಾವಿ ಕ್ಷೇತ್ರದ ಮಾಜಿ ಸಂಸದ ಪ್ರಕಾಶ್‌ ಹುಕ್ಕೇರಿ ಪ್ರಬಲ ಆಕಾಂಕ್ಷಿಯಾಗಿದ್ದು, ಉಪಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಟಿಕೆಟ್‌ ತನಗೆ ಲಭ್ಯವಾಗುವುದಿಲ್ಲ ಎಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರ್ಯಕಾರಿ ಸಭೆಗೆ ಪ್ರಕಾಶ್‌ ಹುಕ್ಕೇರಿ ಗೈರಾಗಿದ್ದಾರೆ ಎನ್ನಲಾಗಿದೆ. ಪ್ರಕಾಶ್‌ ಹುಕ್ಕೇರಿ ಪುತ್ರ ಶಾಸಕ ಗಣೇಶ್‌ ಹುಕ್ಕೇರಿ ಕೂಡಾ ಪಕ್ಷದ ಸಭೆಗೆ ಹಾಜರಿಯಾಗದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com