'ಏಕಗವಾಕ್ಷಿ' ಬಗ್ಗೆ ಬಿಜೆಪಿ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ –ಹೆಚ್‌ಡಿ ಕುಮಾರಸ್ವಾಮಿ

ಕರ್ನಾಟಕ ಸರ್ಕಾರದಲ್ಲೇ 'ಏಕಗವಾಕ್ಷಿ'ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿಯ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಸವಾಲು ಹಾಕಿದ್ದಾರೆ.
'ಏಕಗವಾಕ್ಷಿ' ಬಗ್ಗೆ ಬಿಜೆಪಿ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ –ಹೆಚ್‌ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಏಕಗವಾಕ್ಷಿ ವ್ಯವಸ್ಥೆ ಕುರಿತು ಆರೋಪ ಹಿನ್ನಲೆ, ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಬಿಜೆಪಿ ನಾಯಕರ ಏಕಗವಾಕ್ಷಿ ತನ ಉಲ್ಲೇಖಿಸಿ ಕಟುವಾಗಿ ಟೀಕಿಸಿದ್ದಾರೆ.

ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಅಳಿಯ ಅಭಿಷೇಕ್‌ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಎಂದು ಮೋದಿ ಉತ್ತರಿಸುವರೇ…? ಎಂದು ಪ್ರಶ್ನಿಸಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ 'ಮಹಾನಾಯಕ-ಏಕಗವಾಕ್ಷಿ' ಬಗ್ಗೆ ಮೋದಿ ಮಾತಾಡುವರೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ಸರ್ಕಾರದಲ್ಲೇ 'ಏಕಗವಾಕ್ಷಿ'ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿಯ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಸವಾಲು ಹಾಕಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com