ಖರ್ಚು-ವೆಚ್ಚ ದುಪ್ಪಟ್ಟಾಗಿದೆ, ರೈತರ ಆದಾಯ ದ್ವಿಗುಣಗೊಳಿಸುವುದು ಎಲ್ಲಿಂದಾ…? ಮೋದಿಗೆ ಹೆಚ್‌ಡಿಕೆ ಪ್ರಶ್ನೆ

ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ, 'ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು,'ಎಂದಿದ್ದಾರೆ. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ ಎಂದು ಹೆಚ್‌ಡಿಕೆ ಕಳವಳ ವ್ಯಕ್ತಪಡಿಸಿದ್ದಾರೆ.
ಖರ್ಚು-ವೆಚ್ಚ ದುಪ್ಪಟ್ಟಾಗಿದೆ, ರೈತರ ಆದಾಯ ದ್ವಿಗುಣಗೊಳಿಸುವುದು ಎಲ್ಲಿಂದಾ…? ಮೋದಿಗೆ ಹೆಚ್‌ಡಿಕೆ ಪ್ರಶ್ನೆ

2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೇ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದಂಥಾ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ? ಎಂದು ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಬೇಕಿದ್ದರೆ 1 ರಿಂದ 2 ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‌ಗಳ ದರ ದುಪ್ಪಟ್ಟಾಗಿದೆ, ಮೋಟರ್‌ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ. 18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ ಎಂದು ಎಚ್ಚರಿಸಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ, 'ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು,'ಎಂದಿದ್ದಾರೆ. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ? ಎಂದು ಕೇಳಿದ್ದಾರೆ

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com