ಏಕ ಪತ್ನಿ ವೃತಸ್ಥ ಸವಾಲು: ಸುಧಾಕರ್‌ ರಾಜಿನಾಮೆಗೆ ಸಿದ್ದರಾಮಯ್ಯ ಪಟ್ಟು

ಸುಧಾಕರ್ ಪ್ರಕಾರ 224 ಶಾಸಕರೂ ವ್ಯಭಿಚಾರಿಗಳಾ? ಈ ರೀತಿ ಹೇಳಿದ ಆರೋಗ್ಯ ಸಚಿವರು ಕೂಡಲೇ ರಾಜಿನಾಮೆ ನೀಡಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಏಕ ಪತ್ನಿ ವೃತಸ್ಥ ಸವಾಲು: ಸುಧಾಕರ್‌ ರಾಜಿನಾಮೆಗೆ ಸಿದ್ದರಾಮಯ್ಯ ಪಟ್ಟು

ಸಿಡಿ ಪ್ರಕರಣದ ಕುರಿತಂತೆ ಪ್ರತಿಪಕ್ಷದ ನಾಯಕರ ನೈತಿಕತೆಯನ್ನು ಪ್ರಶ್ನಿಸುವ ಭರದಲ್ಲಿ ರಾಜ್ಯದ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಚಿವ ಸುಧಾಕರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಮಧ್ಯಾಹ್ನದ ವಿರಾಮದ ಬಳಿಕ ಕಲಾಪ ಸೇರಿದಾಗ ಸುಧಾಕರ್‌ ಹೇಳಿಕೆಯನ್ನು ವಿಪಕ್ಷ ಶಾಸಕರು ಕಟುವಾಗಿ ಟೀಕಿಸಿದ್ದು, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಸುಧಾಕರ್‌ ಅವರು ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ನನ್ನ, ಕೆ.ಆರ್‌.ರಮೇಶ್‌ಕುಮಾರ್‌, ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್‌ ಅವರ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ. 224 ಶಾಸಕರು ಸತ್ಯ ಹರಿಶ್ಚಂದ್ರರಲ್ಲ ಎಂದಿದ್ದಾರೆ. ಇದು ಹಕ್ಕುಚ್ಯುತಿಯಾಗುತ್ತದೆ. ಎಲ್ಲಾ ಶಾಸಕರ ಬಗ್ಗೆಯೂ ತನಿಖೆ ಮಾಡಿಸಿ’ ಎಂದು ಆಗ್ರಹಿಸಿದ್‌ದಾರೆ.

ಸದನದಲ್ಲಿ ಸಚಿವ ಸುಧಾಕರ್ ರನ್ನು ಸಮರ್ಥಿಸಿ ಮಾತನಾಡಿದ ಗೃಹಸಚಿವ ಬಸವರಾಜ ಬೊಮ್ಮಾಯಿ, ‘ಸಚಿವರು ಸದನದಿಂದ ಹೊರಗೆ ಮಾಧ್ಯಮದ ಬಳಿ ಮಾತನಾಡಿದ್ದಾರೆ. ಅವರು ಯಾವ ಅರ್ಥದಲ್ಲಿ ಏನು ಮತ್ತು ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಂಬುದನ್ನು ಪರಿಶೀಲಿಸಬೇಕು. ಸದನದಲ್ಲಿ ಸಚಿವರ ಚಾರಿತ್ರ್ಯಕ್ಕೆ ಧಕ್ಕೆ ಬರುವಂತೆ ನೀವು ಮಾತನಾಡಲಿಲ್ಲವೇ’ ಎಂದು ಮರು ಪ್ರಶ್ನಿಸಿದ್ದಾರೆ.

ಬೊಮ್ಮಾಯಿ ಸಮರ್ಥನೆಗೆ ಕೆಂಡಾಮಂಡಲರಾದ ಸಿದ್ದರಾಮಯ್ಯ ‘ಮುಖ್ಯಮಂತ್ರಿ ಸೇರಿದಂತೆ ಎಲ್ಲ ಶಾಸಕರ ಬಗ್ಗೆಯೂ ತನಿಖೆ ನಡೆಯಲಿ. ಈ ರೀತಿ ಹೇಳಿಕೆ ನೀಡಿದ ಸುಧಾಕರ್‌ ಅವರು ರಾಜೀನಾಮೆ ನೀಡಬೇಕು. ಇವರ ಪ್ರಕಾರ 224 ಶಾಸಕರೂ ವ್ಯಭಿಚಾರಿಗಳಾ? ಸುಧಾಕರ್‌ರನ್ನು ನೀವೇಕೆ ಸಮರ್ಥಿಸಿಕೊಳ್ಳುತ್ತೀರಿ’ ಎಂದು ಪ್ರಶ್ನಿಸಿದ್ದಾರೆ.

‘ನಾನು 32 ಕ್ಕೂ ಹೆಚ್ಚು ವರ್ಷಗಳಿಂದ ಸದನದಲ್ಲಿದ್ದೇನೆ. ಹಿಂದೆಂದೂ ಯಾರೂ ಈ ರೀತಿ ಮಾತನಾಡಿರಲಿಲ್ಲ. ಇದರಿಂದ ನನಗೆ ನೋವಾಗಿದೆ. ಎಲ್ಲರ ಬಗ್ಗೆಯೂ ತನಿಖೆ ಆಗಲಿ. ಈ ಸದನದಲ್ಲಿ ಮಹಿಳೆಯರೂ ಇದ್ದಾರೆ. ಸಚಿವರು ಇಂತಹ ಮಾತುಗಳನ್ನು ಆಡಿದ್ದು ಸರಿಯಲ್ಲ’ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಏಕ ಪತ್ನಿ ವೃತಸ್ಥ ಸವಾಲು: ಸುಧಾಕರ್‌ ರಾಜಿನಾಮೆಗೆ ಸಿದ್ದರಾಮಯ್ಯ ಪಟ್ಟು
ಏಕಪತ್ನೀ ವೃತಸ್ಥ ಸವಾಲು ಹಾಕಿದ ಸುಧಾಕರ್:‌ ಡಿಕೆಶಿ & ಹೆಚ್‌ಡಿಕೆ ಪ್ರತಿಕ್ರಿಯೆ

ಜೆಡಿಎಸ್‌ ಶಾಸಕರು ಕೂಡಾ ಸುಧಾಕರ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಸಚಿವ ಸುಧಾಕರ್‌ ಅವರು ಸದನದ ಸದಸ್ಯರ ಕ್ಷಮೆಯನ್ನು ಕೇಳಬೇಕು ಎಂದು ಜೆಡಿಎಸ್‌ ಶಾಸಕ ಬಂಡೆಪ್ಪ ಕಾಶೆಂಪುರ್‌ ಆಗ್ರಹಿಸಿದ್ದಾರೆ.

ಸದನದಲ್ಲಿ ಗದ್ದಲ ವಿಪರೀತವಾಗುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಯಾರೂ ಭಾವಾವೇಶಕ್ಕೆ ಒಳಗಾಗಿ ಸದಸ್ಯರ ಬಗ್ಗೆ, ಸದನದ ಗೌರವಕ್ಕೆ ಧಕ್ಕೆ ತರುವ ಹಾಗೆ ಮಾತನಾಡಬಾರದು. ಎಲ್ಲರೂ ಸದನಕ್ಕೆ ಮತ್ತು ಸದಸ್ಯರಿಗೆ ಗೌರವ ತರುವ ರೀತಿಯಲ್ಲೇ ಮಾತನಾಡಬೇಕು. ನಿಮ್ಮೆಲ್ಲರಿಗೂ ಆದ ನೋವು ನನಗೂ ಆಗಿದೆ’ ಎಂದು ಆಕ್ರೋಶಭರಿತ ಸದಸ್ಯರ ಸಮಾಧಾನಕ್ಕೆ ಯತ್ನಿಸಿದ್ದಾರೆ.

ಏಕ ಪತ್ನಿ ವೃತಸ್ಥ ಸವಾಲು: ಸುಧಾಕರ್‌ ರಾಜಿನಾಮೆಗೆ ಸಿದ್ದರಾಮಯ್ಯ ಪಟ್ಟು
ಏಕ ಪತ್ನಿ ವೃತಸ್ಥ ಸವಾಲು: ವಿಷಾದ ವ್ಯಕ್ತಪಡಿಸಿದ ಸಚಿವ‌ ಡಾ. ಕೆ ಸುಧಾಕರ್

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com