ಸಿ.ಡಿ ಪ್ರಕರಣ: ರಕ್ಷಣೆ ಕೋರಿದ ಯುವತಿಗೆ ರಕ್ಷಣೆ ಕೊಡುವುದು ಸರ್ಕಾರದ ಕರ್ತವ್ಯ -ಸಿದ್ದರಾಮಯ್ಯ

ರಮೇಶ್ ಜಾರಕಿಹೊಳಿ ಬಳಿ ಅಂಥಾ ಸ್ಪೋಟಕ ಸಾಕ್ಷ್ಯ ಇದ್ದಿದ್ದರೆ, ಈ ಹಿಂದೆ ದೂರು ದಾಖಲು ಮಾಡಿದಾಗಲೇ ಸಾಕ್ಷ್ಯವನ್ನೂ ನಮೂದಿಸಬೇಕಿತ್ತು. ಇಷ್ಟುದಿನದವರೆಗೆ ಸಾಕ್ಷ್ಯವನ್ನು ಬಚ್ಚಿಟ್ಟಿದ್ದು ಕಾನೂನು ಪ್ರಕಾರ ಅಪರಾಧವಾಗುತ್ತದೆ. ಇನ್ನಾದರೂ ತಡ ಮಾಡದೆ ಎಸ್ಐಟಿ ಮುಂದೆ ತಮ್ಮ ಬಳಿಯಿರುವ ಸಾಕ್ಷ್ಯವನ್ನು ಹಾಜರುಪಡಿಸಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿ.ಡಿ ಪ್ರಕರಣ: ರಕ್ಷಣೆ ಕೋರಿದ ಯುವತಿಗೆ ರಕ್ಷಣೆ ಕೊಡುವುದು ಸರ್ಕಾರದ ಕರ್ತವ್ಯ -ಸಿದ್ದರಾಮಯ್ಯ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ದೌರ್ಜನ್ಯಕ್ಕೊಳಗಾದ ಯುವತಿಗೆ ರಕ್ಷಣೆ ಕೊಡಿಸುವ ಸಂಬಂಧ ನಿನ್ನೆ ಗೃಹ ಸಚಿವರ ಜೊತೆ ಮಾತನಾಡಿದ್ದೇನೆಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಪೊಲೀಸ್ ಕಮಿಷನರ್ ಅವರ ಜೊತೆಗೂ ಮಾತನಾಡುತ್ತೇನೆ. ರಕ್ಷಣೆ ಕೇಳಿದವರಿಗೆ ರಕ್ಷಣೆ ನೀಡಬೇಕಾದುದ್ದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಆದ್ಯ ಕರ್ತವ್ಯ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ಅವರಿಂದ ದೌರ್ಜನ್ಯಕ್ಕೊಳಗಾದ ಮಹಿಳೆ ಹೀಗೆ ವೀಡಿಯೋ ಮೂಲಕ ರಕ್ಷಣೆ ಕೇಳುವ ಬದಲು ನೇರವಾಗಿ ಎಸ್ಐಟಿ ಮುಂದೆ ಹಾಜರಾಗಿ ತನ್ನ ಹೇಳಿಕೆಯನ್ನು ದಾಖಲಿಸುವುದು ಸೂಕ್ತ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸಿಡಿ ಹಗರಣದ ಬಗ್ಗೆ ನಾವು ಧರಣಿ ನಡೆಸುವ ವೇಳೆ ರಾಜ್ಯ ಸರ್ಕಾರ ಕೆಟಿಟಿಪಿ ಕಾಯ್ದೆಗೆ ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸರ್ಕಾರಿ ಕಾಂಟ್ರಾಕ್ಟ್ ಗಳಲ್ಲಿದ್ದ ಮೀಸಲಾತಿಯನ್ನು ಕಸಿದುಕೊಂಡಿದೆ. ಶೋಷಿತ ಸಮುದಾಯಗಳಿಗೆ ಇದರಿಂದ ಅನ್ಯಾಯವಾಗಲಿದ್ದು, ತಿದ್ದುಪಡಿಯನ್ನು ವಾಪಾಸು ಪಡೆಯಬೇಕೆಂದು ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿ ಬಳಿ ಅಂಥಾ ಸ್ಪೋಟಕ ಸಾಕ್ಷ್ಯ ಇದ್ದಿದ್ದರೆ, ಈ ಹಿಂದೆ ದೂರು ದಾಖಲು ಮಾಡಿದಾಗಲೇ ಸಾಕ್ಷ್ಯವನ್ನೂ ನಮೂದಿಸಬೇಕಿತ್ತು. ಇಷ್ಟುದಿನದವರೆಗೆ ಸಾಕ್ಷ್ಯವನ್ನು ಬಚ್ಚಿಟ್ಟಿದ್ದು ಕಾನೂನು ಪ್ರಕಾರ ಅಪರಾಧವಾಗುತ್ತದೆ. ಇನ್ನಾದರೂ ತಡ ಮಾಡದೆ ಎಸ್ಐಟಿ ಮುಂದೆ ತಮ್ಮ ಬಳಿಯಿರುವ ಸಾಕ್ಷ್ಯವನ್ನು ಹಾಜರುಪಡಿಸಲಿ ಎಂದಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಈ ಸಲದ ಅಧಿವೇಶನಕ್ಕೆ ನಮ್ಮ ಸಂಪೂರ್ಣ ಸಹಕಾರ ಕೊಟ್ಟಿದ್ದೇವೆ. ಬಜೆಟ್ ಮೇಲೆ ಚರ್ಚಿಸಿದ್ದೇವೆ, ಜನವಿರೋಧಿ ಕಾಯ್ದೆಗಳನ್ನು ವಿರೋಧಿಸಿದ್ದೇವೆ, ನಮ್ಮ ಶಾಸಕರು ಸಾಕಷ್ಟು ಪ್ರಶ್ನೆಗಳನ್ನು ಕೇಳುವ ಮೂಲಕ ಸದನದ ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದೇವೆಂಬ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com