ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳದ್ದೇ ಸುದ್ದಿ. ಮಸ್ಕಿ ಮತ್ತು ಬಸವಕಲ್ಯಾಣ ವಿಧಾನ ಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಎಪ್ರಿಲ್ 17 ರಂದು ನಡೆಯಲಿದ್ದು ಎಲ್ಲಾ ಪಕ್ಷಗಳು ಗೆಲುವಿನ ತಂತ್ರ ಹೆಣೆಯುತ್ತಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೂರು ಕ್ಷೇತ್ರಗಳ ಮತ ಏಣಿಕೆ ಮೇ 2ರಂದು ನಡೆಯಲಿದೆ. ರಾಜ್ಯದ ಮೂರು ಪ್ರಮುಖ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗಿದೆ. ಬಸವಕಲ್ಯಾಣ ಕ್ಷೇತ್ರಕ್ಕೆ ಜೆಡಿಎಸ್ ಈ ಬಾರಿ ಯಸ್ರಬ್ ಅಲಿ ಖಾದ್ರಿ ಅವರನ್ನು ಕಣಕ್ಕಿಳಿಸಿರುವುದು ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40,000 ಅಲ್ಪಸಂಖ್ಯಾತ ಮತಗಳಿವೆ. ಜೆಡಿಎಸ್ ನವರು ಬಿಜೆಪಿ ಜೊತೆ ಒಳಒಪ್ಪಂದ ಮಾಡಿಕೊಂಡು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ನಮ್ಮ ಮತಗಳನ್ನು ವಿಭಜಿಸುವ ಹುನ್ನಾರ ಮಾಡುತ್ತಿದ್ದಾರೆ. ಇದನ್ನು ಕ್ಷೇತ್ರದ ಜನ ಅರ್ಥಮಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.