ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಯುವತಿ ಮತ್ತು ಆಕೆಯ ತಮ್ಮನ ನಡುವಿನ ಫೋನ್ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಡಿಕೆ ಶಿವಕುಮಾರ್ ಭೇಟಿಯಾಗುವ ವಿಚಾರ ಯುವತಿ ಪ್ರಸ್ತಾಪಿಸಿದ್ದಳು, ಈ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದವರು ಮತ್ತು ರಾಜಕರಣಿಗಳು ಸಾರ್ವಜನಿಕ ಜೀವನದ್ಲಲಿರುವವರು, ನೊಂದವರಿಗೆ ಸ್ಪಂದಿಸುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೆ ಆ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿದ್ದೆ ಅಂತಾ ಹೇಳಿದ್ದಾಳೆ. ದಿನಬೆಳಗಾದರು ನನ್ನ ಮನೆ ಮುಂದೆ ಸಾಕಷ್ಟು ಜನ ಸಮಸ್ಯೆ ಹೇಳಿಕೊಂಡು ಬರುತ್ತಾರೆ. ಅದೇ ರೀತಿ ಯಾರು ಬೇಕಾದರೂ ಬಂದು ಭೇಟಿ ಮಾಡಬಹುದು ಎಂದಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ನಮ್ಮವರಿಂದ ತೊಂದರೆಯಾದರೆ ಆಡಳಿತ ಪಕ್ಷದವರ ಬಳಿ ಹೋಗುತ್ತಾರೆ. ಅದೇ ರೀತಿ ಆ ಯುವತಿ ಬಂದಿರಬಹುದು, ಆದರೆ ನಾನು ಭೇಟಿ ಮಾಡಿಲ್ಲ, ಮತ್ತೆ ಆ ಯುವತಿ ಭೇಟಿಯಾಗಲು ಬಂದರೆ ನಾನು ಪರಿಶೀಲಿಸುತ್ತೇನೆ ಎಂದಿದ್ದಾರೆ.
ಯುವತಿ ರಕ್ಷಣೆ ಕೇಳಿದ ವಿಚಾರ ಪ್ರಸ್ತಾಪಿಸಿ, ಕೇಳಿದವರಿಗೆ ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಅವರಿಗೆ ಅವರದೇ ಆದ ಘನತೆ ಇದೆ. ಅವರು ಸೂಕ್ತ ರಕ್ಷಣೆ ನೀಡುತ್ತಾರೆ. ಯುವತಿ ಪೋಷಕರು ಯಾರ ಬಳಿ ಇದ್ದಾರೆ ಅಂತಾ ನನಗೆ ಗೊತ್ತಿಲ್ಲ. ಅದು ಆ ಯುವತಿಗೇ ಗೊತ್ತು. ನಾನು ಅದನ್ನು ಯಾಕೆ ಟ್ರ್ಯಾಕ್ ಮಾಡಲಿ ಎಂದಿದ್ದಾರೆ.