ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ -JDS

ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು, ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ ಎಂದು ಜೆಡಿಎಸ್‌ ಸಾಮಾಜಿಕಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ -JDS
admin

ರಾಜ್ಯ ರಾಜಕರಣದಲ್ಲಿ ಸಿ.ಡಿ ವಿಚಾರ, ಹೆಚ್ಚು ಸದ್ದು ಮಾಡುತ್ತಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್‌ ಕಾಂಗ್ರೆಸ್‌, ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದೆ. ಜೊತೆಗೆ ಪೊಲೀಸ್‌ ಇಲಾಖೆ ರಾಜಕೀಯ ಒತ್ತಡಗಳಿಗೆ ಮಣಿಯದೆ ನ್ಯಾಯಯುತ ತನಿಖೆ ನಡೆಸಿ, ನಿಜ ಸಂಗತಿಯನ್ನು ಬಯಲಿಗೆಳೆಯಬೇಕೆಂದು ಆಗ್ರಹಿಸಿದೆ.ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ ಎಂದಿದೆ.

ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ 'ಹನಿಟ್ರ್ಯಾಪ್‌' ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜೆಡಿಎಸ್‌ ಹರಿಹಾಯ್ದಿದೆ.

ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು, ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ ಎಂದಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕೆಂದು ಒತ್ತಾಯಿಸಲಾಗಿದೆ.

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ ಎನ್ನುವುದ ಮೂಲಕ ನ್ಯಾಯಯುತ ತನಿಖೆ ಮಾಡಬೇಕೆಂದು ಪೊಲೀಸ್‌ ಇಲಾಖೆಯನ್ನು ಎಚ್ಚರಿಸಿದೆ.

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com