ಕರೋನಾವನ್ನು ಔಷಧಿ-ಚಿಕಿತ್ಸೆಯಿಂದ ಗೆಲ್ಲಬೇಕೇ ಹೊರತು ಸುಳ್ಳುಗಳಿಂದಲ್ಲ -ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಸುಳ್ಳು ಹೇಳಿರುವುದು ಕರೋನಾ ಸಾವಿನ ಬಗ್ಗೆ ಮಾತ್ರ ಅಲ್ಲ, ಔಷಧಿ, ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಗಳಿಂದ ಹಿಡಿದು ಆಸ್ಪತ್ರೆಗಳ ಹಾಸಿಗೆ ಖರೀದಿವರೆಗೆ ಎಲ್ಲದರಲ್ಲಿಯೂ ನಡೆದಿರುವ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವ ಸುಧಾಕರ್ ಅವರು ಸುಳ್ಳು ಹೇಳುತ್ತಲೇ ಇದ್ದಾರೆ ಎಂದು ಆರೋಪಿಸಿದ್ದಾರೆ.
ಕರೋನಾವನ್ನು ಔಷಧಿ-ಚಿಕಿತ್ಸೆಯಿಂದ ಗೆಲ್ಲಬೇಕೇ ಹೊರತು ಸುಳ್ಳುಗಳಿಂದಲ್ಲ -ಸಿದ್ದರಾಮಯ್ಯ

ಕರೋನಾ ಸಾವಿನ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆ ಮತ್ತು ರಾಜ್ಯ ಯೋಜನಾ ಮತ್ತು ಅಂಕಿ ಅಂಶ ಇಲಾಖೆಯ ಸಂಖ್ಯೆಯಲ್ಲಿ ವ್ಯತ್ಯಾಸವಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದಾರೆ.

ರಾಜ್ಯದ ಆರೋಗ್ಯ ಇಲಾಖೆ ದಾಖಲೆ ಪ್ರಕಾರ 2020ರ ಡಿಸೆಂಬರ್ ವರೆಗಿನ ಕರೋನಾ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಕರೋನಾಸಾವಿನ ಸಂಖ್ಯೆ- 22,320. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಮತ್ತು ಸುಧಾಕರ್ ಅವರೇ, ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು? ಎಂದು ಪ್ರಶ್ನಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರೋನಾ ಉಲ್ಭಣಕ್ಕೆ ಬಿಜೆಪಿ ಸರ್ಕಾರದ ಅಸಾಮರ್ಥ್ಯ, ಭ್ರಷ್ಟಾಚಾರ ಹಾಗೂ ಸುಳ್ಳುಗಳು ಕಾರಣ ಎಂದು ಮೊದಲ ದಿನದಿಂದ ಹೇಳುತ್ತಾ ಬಂದಿದ್ದೇನೆ. ತಪ್ಪನ್ನು ತಿದ್ದಿಕೊಳ್ಳದೆ ಎಲ್ಲವನ್ನು ಸಮರ್ಥಿಸಿಕೊಂಡ ಸರ್ಕಾರದ ಲಜ್ಜೆಗೇಡಿತನದ ಫಲವನ್ನು ರಾಜ್ಯದ ಜನ ಅನುಭವಿಸಬೇಕಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಸುಳ್ಳು ಹೇಳಿರುವುದು ಕರೋನಾ ಸಾವಿನ ಬಗ್ಗೆ ಮಾತ್ರ ಅಲ್ಲ, ಔಷಧಿ, ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಗಳಿಂದ ಹಿಡಿದು ಆಸ್ಪತ್ರೆಗಳ ಹಾಸಿಗೆ ಖರೀದಿವರೆಗೆ ಎಲ್ಲದರಲ್ಲಿಯೂ ನಡೆದಿರುವ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವ ಸುಧಾಕರ್ ಅವರು ಸುಳ್ಳು ಹೇಳುತ್ತಲೇ ಇದ್ದಾರೆ ಎಂದು ಆರೋಪಿಸಿದ್ದಾರೆ.

ಕರೋನಾ ಸೋಂಕು, ಸಾವು, ಚಿಕಿತ್ಸೆ ಮತ್ತು ನೊಂದ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಿ ನಿಜಸಂಗತಿಯನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕರೋನಾವನ್ನು ಔಷಧಿ-ಚಿಕಿತ್ಸೆಯಿಂದ ಗೆಲ್ಲಬೇಕೇ ಹೊರತು ಸುಳ್ಳುಗಳಿಂದಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com