CD ಪ್ರಕರಣ: ಯುವತಿಯನ್ನು ಪತ್ತೆಹಚ್ಚಲಾಗದ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಎಂಬ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
CD ಪ್ರಕರಣ: ಯುವತಿಯನ್ನು ಪತ್ತೆಹಚ್ಚಲಾಗದ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ನಾಯಕ ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದೆ ಎನ್ನಲಾದ ಸಿಡಿ ಪ್ರಕರಣದ ಸಂತ್ರಸ್ತೆ ಯುವತಿಯನ್ನು ಪೊಲೀಸ್‌ ಇಲಾಖೆಗೆ ಇನ್ನೂ ಪತ್ತೆಹಚ್ಚಲು ಸಾಧ್ಯವಾಗದಿರುವುದನ್ನು ಖಂಡಿಸಿ ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆಗೆಳೆದಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಎಂಬ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ ಬಸವರಾಜ್‌ ಬೊಮ್ಮಾಯಿ ಈ ಬಗ್ಗೆ ಗಮನಹರಿಸಬೇಕೆಂದು ಒತ್ತಾಯಿಸಿದ್ದಾರೆ.

CD ಪ್ರಕರಣ: ಯುವತಿಯನ್ನು ಪತ್ತೆಹಚ್ಚಲಾಗದ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ
ಸಿ.ಡಿ ಪ್ರಕರಣ: ರಕ್ಷಣೆ ಕೋರಿದ ಯುವತಿಗೆ ರಕ್ಷಣೆ ಕೊಡುವುದು ಸರ್ಕಾರದ ಕರ್ತವ್ಯ -ಸಿದ್ದರಾಮಯ್ಯ

ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ಪೊಲೀಸ್‌ ಇಲಾಖೆಯನ್ನು ಟೀಕಿಸಿದ್ದಾರೆ.

CD ಪ್ರಕರಣ: ಯುವತಿಯನ್ನು ಪತ್ತೆಹಚ್ಚಲಾಗದ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ
ಸಿ.ಡಿ ಪ್ರಕರಣ: ಸಂತ್ರಸ್ತ ಯುವತಿಗೆ ರಕ್ಷಣೆ ನೀಡುವಂತೆ ಸಿದ್ದರಾಮಯ್ಯ ಆಗ್ರಹ

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತೆ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

CD ಪ್ರಕರಣ: ಯುವತಿಯನ್ನು ಪತ್ತೆಹಚ್ಚಲಾಗದ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ
ಸದನದಲ್ಲಿ CD ಸದ್ದು: ಜಾರಕಿಹೊಳಿ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಸಿದ್ದರಾಮಯ್ಯ ಪಟ್ಟು

ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ವ್ಯಂಗ್ಯ ಮಾಡಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com