ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಸಂವಿಧಾನಬದ್ಧ ಹಕ್ಕು: ಸಿದ್ದರಾಮಯ್ಯ

ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಸಂವಿಧಾನಬದ್ಧ ಹಕ್ಕು: ಸಿದ್ದರಾಮಯ್ಯ

ರಾಜ್ಯದಲ್ಲಿ ಕೇಳಿಬರುತ್ತಿರುವ ವಿವಿಧ ಸಮುದಾಯಗಳ ಮೀಸಲಾತಿ ಕೂಗು ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತು ಸರಣಿ ಟ್ವೀಟ್‌ ಮಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಯಡಿಯೂರಪ್ಪ ನೇತ್ರತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತ ಬಂದಿದೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ವರೆಗೆ ಸ್ವೀಕರಿಸದಿರುವುದು ಖಂಡನೀಯ. ತಕ್ಷಣ ವರದಿ ಸ್ವೀಕರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ನಂತರದಿಂದ ಈ ವರೆಗೆ ಸಮಾಜದ ವಿವಿಧ ಸಮುದಾಯಗಳಲ್ಲಾದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಲು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ನಗರದ ಶೇ.90 ಹಾಗೂ ರಾಜ್ಯದ ಗ್ರಾಮೀಣ ಭಾಗದ ಶೇ.100 ರಷ್ಟು ಕುಟುಂಬಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಮಾಹಿತಿ ಇರುವ ವೈಜ್ಞಾನಿಕ ಸಮೀಕ್ಷೆಯೊಂದರ ವರದಿ ಸ್ವೀಕರಿಸದಿರಲಿ ಕಾರಣ ಏನು ಎಂಬುದನ್ನು ರಾಜ್ಯ ಸರ್ಕಾರ ಹೇಳಲಿ ಎಂದು ಆಗ್ರಹಿಸಿದ ಸಿದ್ದರಾಮಯ್ಯ, ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು. ಯಾವ ಸಮುದಾಯಗಳು ಸಂವಿಧಾನದ ನಿಯಮಗಳಡಿ ಮೀಸಲಾತಿಗೆ ಅರ್ಹವಿದ್ದಾವೆ ಅವುಗಳೆಲ್ಲವಕ್ಕೂ ಸರ್ಕಾರ ಮೀಸಲಾತಿ ನೀಡಲು ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com