ಡಿಕೆ ಶಿವಕುಮಾರ್‌ ಕಾರಿನ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ದಾಳಿ: ಸಿದ್ದರಾಮಯ್ಯ ಖಂಡನೆ

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಇದು ಕೆಲ ಕಾಲ ಉದ್ವಿಘ್ನ ಪರಿಸ್ಥಿತಿಗೆ ಕಾರಣವಾಗಿದೆ.
ಡಿಕೆ ಶಿವಕುಮಾರ್‌ ಕಾರಿನ ಮೇಲೆ 
ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ದಾಳಿ: ಸಿದ್ದರಾಮಯ್ಯ ಖಂಡನೆ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕಾರಿನ ಮೇಲೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಬೆಂಬಲಿಗರು ದಾಳಿ ನಡೆಸಿದ್ದು, ಶಿವಕುಮಾರ್‌ ಸಂಚರಿಸುತ್ತಿದ್ದ ಕಾರಿನ ಮೇಲೆ ಚಪ್ಪಲಿ ಎಸೆದಿದ್ದಾರೆ. ಬೆಂಗಾವಲು ವಾಹನಗಳ ಗಾಜು ಪುಡಿಮಾಡಿ ಪುಂಡಾಟಿಕೆ ಮೆರೆದಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಇದು ಕೆಲ ಕಾಲ ಉದ್ವಿಘ್ನ ಪರಿಸ್ಥಿತಿಗೆ ಕಾರಣವಾಗಿದೆ. ಬಳಿಕ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದು, ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬೆಳಗಾವಿ ಲೋಕಸಭೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ನಾಳೆ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಲು ಡಿಕೆ ಶಿವಕುಮಾರ್ ಬೆಳಗಾವಿಗೆ ತೆರಳಿದ್ದರು.

ಸಿ.ಡಿ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್‌ ಹೆಸರು ಬಲವಾಗಿ ಕೇಳಿಬರುತ್ತಿದ್ದಂತೆಯೇ, ರಮೇಶ್‌ ಜಾರಕಿಹೊಳಿ ಬಹಿರಂಗವಾಗಿ ಡಿಕೆ ಶಿವಕುಮಾರ್‌ಗೆ ಸವಾಲು ಹಾಕಿ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಸಿದ್ದರಾಮಯ್ಯ ಖಂಡನೆ:

ಶಿವಕುಮಾರ್‌ ಕಾರಿನ ಮೇಲೆ ನಡೆದ ದಾಳಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು‌ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ. ಇದು ಬಿಜೆಪಿ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನ ಗಮನಿಸುತ್ತಿದ್ದಾರೆ, ಎಚ್ಚರ ಇರಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಡಿಕೆ ಶಿವಕುಮಾರ್‌ ಕಾರಿನ ಮೇಲೆ 
ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ದಾಳಿ: ಸಿದ್ದರಾಮಯ್ಯ ಖಂಡನೆ
ಶರ್ಟ್, ಪ್ಯಾಂಟ್ ಬಿಚ್ಚಲು ಇವರಿಗೆ ಕಾಂಗ್ರೆಸ್ ನವರು ಹೇಳಿ ಕೊಟ್ಟಿದ್ರಾ? - ಡಿ.ಕೆ. ಶಿವಕುಮಾರ್ ಪ್ರಶ್ನೆ

ಬಿಜೆಪಿ ಆಳ್ವಿಕೆಯಲ್ಲಿ ವಿರೋಧಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಪಾಡೇನು? ರಾಜ್ಯದ ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂಬ ಸಿಡಿ ಹಗರಣದ ಯುವತಿಯ ಹೇಳಿಕೆಯನ್ನು ಸಮರ್ಥಿಸುವಂತಿದೆ ಬೆಳಗಾವಿ ಪೊಲೀಸರ 'ಮೂಕನಾಟಕ' ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com