ಬೆಳಗಾವಿ ಲೋಕಸಭಾ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ

ಜಿಲ್ಲಾ ಚುನಾವಣಾಧಿಕಾರಿ ಹಾಗು ಜಿಲ್ಲಾಧಿಕಾರಿಯಾದ ಕೆ. ಹರೀಶ್‌ ಕುಮಾರ್‌ ಅವರಿಗೆ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್‌ ಅಂಗಡಿ ಮಾರ್ಚ್‌ 30 ರಂದು ನಾಮಪತ್ರ ಸಲ್ಲಿಸಿದ್ದಾರೆ.
ಬೆಳಗಾವಿ ಲೋಕಸಭಾ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ

ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ದಿವಂಗತ ಮಾಜಿ ಸಂಸದ ಸುರೇಶ್‌ ಅಂಗಡಿ ಪುತ್ರಿ ಮಂಗಲಾ ಸುರೇಶ್‌ ಅಂಗಡಿ ಇಂದು (ಮಾರ್ಚ್‌ 30) ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾ ಚುನಾವಣಾ ಅಧಿಕಾರಿ ಹಾಗು ಜಿಲ್ಲಾಧಿಕಾರಿಯಾದ ಕೆ. ಹರೀಶ್‌ ಕುಮಾರ್‌ ಅವರಿಗೆ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್‌ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರುಜೋಳ, ಸಚಿವ ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ ಸೇರಿದಂತೆ ಇತರೆ ಬಿಜೆಪಿ ನಾಯಕರು ಹಾಜರಿದ್ದರು.

ಮಾರ್ಚ್‌ 29 ರಂದು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸತೀಶ್ ‌ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್‌ ಹಾಗು ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದೆ. ಸತತ 20 ವರ್ಷಗಳಿಂದ ಬಿಜೆಪಿ ತೆಕ್ಕೆಯಲ್ಲಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಈ ಬಾರಿಯೂ ಬಿಜೆಪಿ ತನ್ನ ತೆಕ್ಕೆಯಲ್ಲಿರಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಏಪ್ರಿಲ್‌ 17 ರಂದು ರಾಜ್ಯದಲ್ಲಿ ಒಂದು ಲೋಕಸಭಾ ಮತ್ತು ಎರಡು ವಿಧಾನಸಭಾ ಉಪಚುನಾವಣೆ ನಡೆಯಲಿದೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com