ರಮೇಶ್‌ ಜಾರಕಿಹೊಳಿ ಮೇಲೆ ಅನಗತ್ಯ ಆರೋಪ: ಸಿಎಂ ಯಡಿಯೂರಪ್ಪ

ಈ ಕೇಸ್‌ ಸಂಬಂಧ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರು ಜವಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ರಮೇಶ್‌ ಜಾರಕಿಹೊಳಿ ಮೇಲೆ ಅನಗತ್ಯ ಆರೋಪ: ಸಿಎಂ ಯಡಿಯೂರಪ್ಪ
Admin

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತಂತೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆಯಡಿಯಲ್ಲಿ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆಂದು ವಿರೋಧ ಪಕ್ಷದವರ ಆರೋಪಕ್ಕೆ ಟಾಂಗ್‌ ಕೊಟ್ಟಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸಿ.ಡಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮೌನವಹಿಸಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ ಈ ಕೇಸ್‌ ಸಂಬಂಧ ಗೃಹಸಚಿವ ಬಸವರಾಜ್‌ ಬೊಮ್ಮಾಯಿ ಅವರು ಜವಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾನೂನು ಚೌಕಟ್ಟಿನ ನಿಯಮಕ್ಕೆ ಅನುಗುಣವಾಗಿ ಗೃಹ ಇಲಾಖೆ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಅವರು ಜವಬ್ದಾರಿಯುತ ಸ್ಥಾನದಲ್ಲಿದ್ದು ಅದಕ್ಕೆ ತಕ್ಕಂತೆ ಮಾತನಾಡ ಬೇಕೆಂದು ತಿರುಗೇಟು ನೀಡಿದ್ದಾರೆ.

ಸಿ.ಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿಯವರು ನಿರಾಪರಾಧಿಯಾಗಿ ಹೊರಬರುತ್ತಾರೆಂಬ ಭರವಸೆ ನೀಡುವ ಮೂಲಕ ಇಲ್ಲಿ ಕಾಂಗ್ರೆಸ್‌ನವರು ದುರುದ್ದೇಶ ರಾಜಕೀಯ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com