ಮುಖ್ಯಮಂತ್ರಿ ವಿರುದ್ಧ ದೂರು: ಈಶ್ವರಪ್ಪ ನಡೆಗೆ ಬಿಜೆಪಿ ನಾಯಕರ ಆಕ್ಷೇಪ

ರಾಜ್ಯಪಾಲ ಹಾಗೂ ಬಿಜೆಪಿ ವರಿಷ್ಟರಿಗೆ ದೂರು ನೀಡಿರುವ ಸಚಿವ ಕೆ ಎಸ್‌ ಈಶ್ವರಪ್ಪ ವಿರುದ್ಧ ಯಡಿಯೂರಪ್ಪ ಅವರ ಪರವಾಗಿರುವ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ.
ಮುಖ್ಯಮಂತ್ರಿ ವಿರುದ್ಧ ದೂರು: ಈಶ್ವರಪ್ಪ ನಡೆಗೆ ಬಿಜೆಪಿ ನಾಯಕರ ಆಕ್ಷೇಪ

ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ತಮಗೆ ಬೇಕಾದವರಿಗೆ ಹೆಚ್ಚಿನ ಮೊತ್ತ ಅನುದಾನು ನೀಡುತ್ತಿದ್ದಾರೆ ಎಂದು ರಾಜ್ಯಪಾಲ ಹಾಗೂ ಬಿಜೆಪಿ ವರಿಷ್ಟರಿಗೆ ದೂರು ನೀಡಿರುವ ಸಚಿವ ಕೆ ಎಸ್‌ ಈಶ್ವರಪ್ಪ ವಿರುದ್ಧ ಯಡಿಯೂರಪ್ಪ ಅವರ ಪರವಾಗಿರುವ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ.

ಕೆ.ಎಸ್.ಈಶ್ವರಪ್ಪ ಅವರಿಗೆ ಯಾವುದೇ ಅಸಮಾಧಾನ ಇದ್ದರೆ, ಅದನ್ನು ಸರ್ಕಾರದ ಒಳಗೇ ಬಗೆಹರಿಸಿಕೊಳ್ಳಬೇಕು. ರಾಜ್ಯಪಾಲರ ಅಂಗಳಕ್ಕೆ ಒಯ್ಯವುದು ಸರಿಯಲ್ಲ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸರ್ಕಾರ ರಚನೆ ಆಗಿದೆ. ಅವರ ಮಾರ್ಗದರ್ಶನದಲ್ಲಿಯೇ ಕೆಲಸ ಮಾಡುತ್ತಿದ್ದೇವೆ. ಯಾವುದೇ ಸಮಸ್ಯೆ, ಸಂದೇಹಗಳಿದ್ದರೆ ಸಚಿವ ಸಂಪುಟ ಅಥವಾ ಸರ್ಕಾರದ ಇತರ ವೇದಿಕೆಗಳಲ್ಲಿ ಚರ್ಚೆ ಮಾಡಬಹುದು. ರಾಜ್ಯಪಾಲರ ಬಳಿ ಹೋಗುವ ಹೊಸ ಪದ್ಧತಿ ಸರಿಯಲ್ಲ ಎಂದು ಈಶ್ವರಪ್ಪ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈಶ್ವರಪ್ಪ ಮತ್ತು ಯಡಿಯೂರಪ್ಪ ಒಟ್ಟಿಗೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ವರಿಷ್ಠರ ಬಳಿಯಾಗಲಿ ಅಥವಾ ರಾಜ್ಯಪಾಲರ ಬಳಿ ಹೋಗುವ ಅಗತ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ದೂರು: ಈಶ್ವರಪ್ಪ ನಡೆಗೆ ಬಿಜೆಪಿ ನಾಯಕರ ಆಕ್ಷೇಪ
BJP vs BJP: ಸಿಎಂ ಬಿಎಸ್‌ವೈ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ

ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚೆ ಮಾಡಬೇಕು: ಎಂಪಿ ರೇಣುಕಾಚಾರ್ಯ

ಸಚಿವ ಈಶ್ವರಪ್ಪ ಅವರು ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು, ರಾಜ್ಯಪಾಲರು, ಪ್ರಧಾನಿಯವರಿಗೆ ದೂರು ಕೊಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಉಪಚುನಾವಣೆ ಸಂದರ್ಭದಲ್ಲಿ ಈ ರೀತಿ ಆದರೆ ಪಕ್ಷ ಮತ್ತು ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಆದ್ದರಿಂದ ನಾಲ್ಕು ಗೋಡಗಳ ಮಧ್ಯೆ ಕುಳಿತು ಚರ್ಚೆ ಮಾಡಬೇಕು. ನಾವು ಹಲವು ಶಾಸಕರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಗ್ರಾಮೀಣಾಭಿವೃದ್ಧಿಗೆ ಅನುದಾನ ಬಿಡಬೇಕು ಎಂದು ಮನವಿ ಮಾಡಿದ್ದೆವು. ನಮ್ಮ ಒತ್ತಾಯಕ್ಕೆ ಮಣಿದು, ಅಭಿವೃದ್ಧಿ ಕೆಲಸಗಳು ಬೇಗನೆ ಆಗಬೇಕು ಎಂಬ ಕಾರಣಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ. ಯಡಿಯೂರಪ್ಪ ಅವರು ಈಶ್ವರಪ್ಪ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಹೇಳಿದ್ದಾರೆ.

ಮುಂದೆ ಈಶ್ವರಪ್ಪ ಈ ರೀತಿ ಮಾಡದಂತೆ ನೋಡಿಕೊಳ್ಳಬೇಕು: ವಿರೂಪಾಕ್ಷ

ಶಾಸಕ ವಿರೂಪಾಕ್ಷ ಕೂಡಾ ತಿರುಗಿ ಬಿದ್ದಿದ್ದು, “ಈಶ್ವರಪ್ಪ ಮನಸ್ಸಿಗೆ ಏನಾದರೂ ನೋವಾಗಿದ್ದರೆ ಬಂದು ಅದನ್ನು ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಕ್ಯಾಬಿನೆಟ್ ಸಚಿವರಾಗಿ ಸಿಎಂ ಮೇಲೆ ಈ ರೀತಿ ದೂರು ಕೊಡುವುದು ಸರಿಯಲ್ಲ. ಹೀಗಾಗಿ ತಕ್ಷಣ ಹೈಕಮಾಂಡ್ ಮಧ್ಯಪ್ರವೇಶ ಮಾಡಬೇಕು. ಇನ್ನು ಮುಂದೆ ಈಶ್ವರಪ್ಪ ಈ ರೀತಿ ಮಾಡದಂತೆ ನೋಡಿಕೊಳ್ಳಬೇಕು ಎಂದು ದೂರು ಕೊಡುತ್ತೇವೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ದೂರು: ಈಶ್ವರಪ್ಪ ನಡೆಗೆ ಬಿಜೆಪಿ ನಾಯಕರ ಆಕ್ಷೇಪ
ಈಶ್ವರಪ್ಪ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

ಈಶ್ವರಪ್ಪ ಬಹಿರಂಗವಾಗಿ ಪತ್ರ ಬರೆಯಬಾರದಿತ್ತು: ಅರುಣ್‌ ಸಿಂಗ್

ಹಿರಿಯ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹೀಗೆ ಬಹಿರಂಗವಾಗಿ ಪತ್ರ ಬರೆಯಬಾರದಿತ್ತು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ ಕೂಡಾ ಅಭಿಪ್ರಾಯಪಟ್ಟಿದ್ದಾರೆ.

ಏನೇ ಮನಸ್ತಾಪವಿದ್ದರೂ ಸಂಬಂಧಿಸಿದವರ ಜೊತೆಗೆ ಚರ್ಚಿಸಬೇಕಿತ್ತು . ಪಕ್ಷದ ವೇದಿಕೆಯಲ್ಲಿ ಇಂಥ ವಿಷಯ ಪ್ರಸ್ತಾಪ ಮಾಡಬೇಕು. ರಾಜ್ಯಪಾಲರಿಗೆ ಈಗೆ ದಿಢೀರ್ ಪತ್ರ ಬರೆಯಬಾರದಿತ್ತು ಎಂದು ಅವರು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಪಕ್ಷವು ಸದ್ಯ, ಐದು ರಾಜ್ಯಗಳ ಹಾಗೂ ಕರ್ನಾಟಕದ ಉಪ ಚುನಾವಣೆ ಮೇಲೆ ಗಮನ ಹರಿಸಿದೆ. ಈಗ ಈಶ್ವರಪ್ಪ ಅವರು ಬರೆದ ಪತ್ರದ ಬಗ್ಗೆ ನಂತರವೇ ಚರ್ಚೆ ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾವೆಲ್ಲರೂ ಸಹೋದ್ಯೋಗಿಗಳು: ಡಾ. ಕೆ ಸುಧಾಕರ್

ನಾವೆಲ್ಲರೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಮಂತ್ರಿಗಳು ಹಾಗೂ ಸಹದ್ಯೋಗಿಗಳಾಗಿದ್ದೇವೆ. ಆದರೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿರುವುದಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಸಚಿವ ಕೆ.ಸುಧಾಕರ್ ಅವರು ಅಸಮಾಧಾನವನ್ನು ಹೊರಹಾಕಿದ್ದಾರೆ.

ಯಡಿಯೂರಪ್ಪ ನಮ್ಮೆಲ್ಲರ ಅಗ್ರಮಾನ್ಯ ನಾಯಕರು. ಅವರನ್ನು ಹಿಂದಿಕ್ಕಬೇಕೆಂಬ ಆಗ್ರಹ ಈಶ್ವರಪ್ಪನವರಿಗೆ ಇಲ್ಲ ಎಂದು ಹೇಳಿದ್ದಾರೆ.

ಪತ್ರ ಬರೆದಿರುವುದು ಸರಿಯಾದ ಕ್ರಮವಲ್ಲ: ಬಿಸಿ ಪಾಟೀಲ್

ಕೃಷಿ ಸಚಿವ ಬಿ. ಸಿ. ಪಾಟೀಲ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪನವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ" ಎಂದು ಹೇಳಿದ್ದಾರೆ.

ಯಾವುದೇ ವಿಷಯಗಳು ಇದ್ದರೂ ಕೂಡ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ ಕೂಡ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಹಿರಿಯರಾದ ಈಶ್ವರಪ್ಪನವರಿಗೆ ಶೋಭೆ ತರುವಂತಹದ್ದಲ್ಲ ಎಂದು ಅವರು ಹೇಳಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com