ಕೋವಿಡ್ 2ನೇ ಅಲೆ: ಸಾಮೂಹಿಕ ಪ್ರಾರ್ಥನೆ, ಜಿಮ್‌, ಸಾರ್ವಜನಿಕ ಸಭೆಗಳಿಗೆ ನಿರ್ಬಂಧ

ಕೋವಿಡ್‌ ಎರಡನೇ ಅಲೆಯ ಆತಂಕ ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾಮೂಹಿಕ ಪ್ರಾರ್ಥನೆ, ಸಾರ್ವಜನಿಕೆ ಸಭೆ, ಮುಷ್ಕರಗಳು ನಿಷೇಧ ಸೇರಿದಂತೆ ಹಲವಾರು ಕಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಕೋವಿಡ್ 2ನೇ ಅಲೆ: ಸಾಮೂಹಿಕ ಪ್ರಾರ್ಥನೆ, ಜಿಮ್‌, ಸಾರ್ವಜನಿಕ ಸಭೆಗಳಿಗೆ ನಿರ್ಬಂಧ

ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆ ವಿಪರೀತ ಏರುತ್ತಿರುವುದರಿಂದ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಾಮೂಹಿಕ ಪ್ರಾರ್ಥನೆ, ಸಾರ್ವಜನಿಕೆ ಸಭೆ, ಮುಷ್ಕರಗಳು ನಿಷೇಧ ಸೇರಿದಂತೆ ಹಲವಾರು ಕಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಮುಖ್ಯಾಂಶಗಳು

1. ವಿದ್ಯಾಗಮವೂ ಸೇರಿದಂತೆ 6 ರಿಂದ 9 ನೇ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. 10, 11 ಹಾಗೂ 12 ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದಾಗ್ಯೂ, ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ.

2. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳಲ್ಲಿ ಮಂಡಳಿಯ /ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತು ಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

3. ವಸತಿ ಶಾಲೆಗಳು ಹಾಗೂ ಬೋರ್ಡಿಂಗ್ ಇರುವ ಶಾಲೆಗಳಲ್ಲಿ 10, 11 ಹಾಗೂ 12ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವವರು ಮತ್ತು ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಲು ಅವಕಾಶವಿರುತ್ತದೆ, ಆದರೆ ಗುಂಪು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ.

ಕೋವಿಡ್ 2ನೇ ಅಲೆ: ಸಾಮೂಹಿಕ ಪ್ರಾರ್ಥನೆ, ಜಿಮ್‌, ಸಾರ್ವಜನಿಕ ಸಭೆಗಳಿಗೆ ನಿರ್ಬಂಧ
ಬೆಂಗಳೂರಿನಲ್ಲಿ ಹೆಚ್ಚಾದ ಕರೋನಾ ಪ್ರಕರಣಗಳು: 6ರಿಂದ 9ರ ವರೆಗಿನ ತರಗತಿಗಳು ಸ್ಥಗಿತ

5. ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ, ಸಾಮಾನ್ಯವಾಗಿ ನಿವಾಸಿಗಳು/ಜನರು ಸೇರುವ ಸ್ಥಳಗಳಾದ ಜಿಮ್, ಪಾರ್ಟಿ ಹಾಲ್‌ಗಳು/ಕ್ಲಬ್ ಹೌಸ್‌ಗಳು, ಈಜು ಕೊಳಗಳು, ಇತ್ಯಾದಿಗಳು ಮುಚ್ಚಲ್ಪಟ್ಟಿರುತ್ತವೆ.

6. ಉಳಿದಂತೆ ಎಲ್ಲಾ ಜಿಮ್‌ಗಳು ಹಾಗೂ ಈಜುಕೊಳಗಳು ಮುಚ್ಚಲ್ಪಟ್ಟಿರುತ್ತವೆ.

7. ಎಲ್ಲಾ ತರಹದ ರ್ಯಾಲಿಗಳು, ಮುಷ್ಕರ, ಧರಣಿ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

8. ಸಾರ್ವಜನಿಕ ಸಾರಿಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗಧಿಪಡಿಸಿರುವ ಆಸನದ ವ್ಯವಸ್ಥೆಯನ್ನು ಮೀರುವಂತಿಲ್ಲ.

9. ಕಛೇರಿಗಳು ಹಾಗೂ ಇತರ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ (work from home) ನಿರ್ವಹಿಸುವ ಅಭ್ಯಾಸ/ ವ್ಯವಸ್ಥೆಯನ್ನು ಪಾಲಿಸುವುದು.

10. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಬಿ.ಬಿ.ಎಂ.ಪಿ ಸೇರಿದಂತೆ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳ ಸಿನೆಮಾ ಹಾಲ್‌ಗಳಲ್ಲಿ ಗರಿಷ್ಠ 50% ವೀಕ್ಷಕರಿಗೆ ಮಾತ್ರ ಅವಕಾಶ ಕಲ್ಪಿಸುವುದು.

11. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಬಿ.ಬಿ.ಎಂ.ಪಿ ಸೇರಿದಂತೆ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಗರಿಷ್ಕ ಗ್ರಾಹಕರ ಸಂಖ್ಯೆಯು ಶೇ.50ರಷ್ಟು ಮೀರುವಂತಿಲ್ಲ

12. ಶಾಪಿಂಗ್ ಮಾಲ್‌ಗಳು, ಮುಚ್ಚಿದ ಪ್ರದೇಶಗಳಲ್ಲಿರುವ ಮಾರ್ಕೆಟ್‌ಗಳು ಹಾಗೂ ಡಿಪಾರ್ಟ್‌ಮೆಂಟಲ್ ಸ್ಟೋರ್‌ಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆಗಾಗಿ ಫೇಸ್‌ ಮಾಸ್ಕ್, ಸಾಮಾಜಿಕ ಅಂತರ 13. ಪಾಲನೆ, ಹ್ಯಾಂಡ್ ಸ್ಮಾನಿಟೈಸರ್, ಆಗಾಗ ಕೈ ತೊಳೆಯುವುದನ್ನು ಜಾರಿಗೊಳಿಸುವುದು. ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ಸ್ಥಳಗಳನ್ನು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಮುಚ್ಚಲಾಗುವುದು.

ಕೋವಿಡ್ 2ನೇ ಅಲೆ: ಸಾಮೂಹಿಕ ಪ್ರಾರ್ಥನೆ, ಜಿಮ್‌, ಸಾರ್ವಜನಿಕ ಸಭೆಗಳಿಗೆ ನಿರ್ಬಂಧ
ಕೋವಿಡ್‌ ಎರಡನೇ ಅಲೆ: ದೇಶದಲ್ಲಿ 81,466 ಹೊಸ ಪ್ರಕರಣಗಳು ಪತ್ತೆ

14. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಜಾತ್ರ ಮಹೋತ್ಸವಗಳು, ಮೇಳಗಳ ಗುಂಪು ಸೇರುವುದರ ನಿಷೇಧ ಮುಂದುವರೆಯುತ್ತದೆ.

15. ವಿವಿಧ ಸಭೆ/ಸಮಾರಂಭ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ದಿನಾಂಕ 12.03.2021ರಲ್ಲಿರುವ ಸುತ್ತೋಲೆಯಂತೆ ಮುಂದುವರಿಸಿದೆ. .

16. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದು.

Attachment
PDF
CamScanner 04-02-2021 18.14.09.pdf
Preview

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com