ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ನೇತೃತ್ವದ, ಎ ಎಸ್ ಬೋಪಣ್ಣ ಹಾಗೂ ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು ತಾತ್ಕಾಲಿಕ ತಡೆ ನೀಡಿದೆ.
ಖಾಸಗಿ ವ್ಯಕ್ತಿಗಳಿಗೆ 24 ಎಕರೆ ಸರಕಾರಿ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪ ಯಡಿಯೂರಪ್ಪರವರ ಮೇಲಿದೆ. 2012 ರಲ್ಲಿ ಲೋಕಾಯುಕ್ತರು ಸಲ್ಲಿಸಿದ್ದ ಚಾರ್ಜ್ಶೀಟ್ನ ಆಧಾರದ ಮೇಲೆ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿತ್ತು.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಲೋಕಾಯುಕ್ತರು 2012 ರಲ್ಲಿ ಸಲ್ಲಿಸಿದ ಚಾರ್ಜ್ಶೀಟ್ನ ಆಧಾರದ ಮೇಲೆ ಮುಂದುವರಿಯುವಂತೆ ನಿರ್ದೇಶಿಸಿ, ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು. ಆದರೆ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಎಸ್ ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಯಡಿಯೂರಪ್ಪ ವಿರುದ್ಧ 2011ರಲ್ಲಿ ಉದ್ಯಮಿ ಅಲಂ ಪಾಷಾ ದೂರು ಸಲ್ಲಿಸಿದ್ದರು.
2006 ರಲ್ಲಿ ಸರ್ಕಾರಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ವಾಧೀನಪಡಿಸಿಕೊಂಡಿತ್ತು. ಆದರೆ ಭೂಮಿಯನ್ನು ಡಿನೋಟಿಫೈ ಮಾಡಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ ಮಾಡಲಾಗಿತ್ತು. ಆ ವೇಳೆ ಉಪಮುಖ್ಯಮಂತ್ರಿಯಾಗಿದ್ದ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರ ದುರುಪಯೋಗಪಡಿಸಿ ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.