ಬುಧವಾರ ಸಾರಿಗೆ ನೌಕರರ ಮುಷ್ಕರ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಮುಷ್ಕರದ ಕುರಿತಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು, ಮೇ 4ರ ಬಳಿಕ ಸರ್ಕಾರ ಮಾತುಕತೆಗೆ ಸಿದ್ದವಿದೆ. ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಾರಿಗೆ ನೌಕರರು ಯಾವುದೇ ರಾಜಕೀಯ ಆಟದ ದಾಳವಾಗದೇ ಮುಷ್ಕರವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದಾರೆ.
ಬುಧವಾರ ಸಾರಿಗೆ ನೌಕರರ ಮುಷ್ಕರ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

2020ರ ಡಿಸೆಂಬರ್‌ ತಿಂಗಳಲ್ಲಿ ಬೃಹತ್‌ ಮುಷ್ಕರ ಹೂಡಿದ್ದ ಸಾರಿಗೆ ನೌಕರರು ಈಗ ತಮ್ಮ ಬೇಡಿಕೆಗಳು ಈಡೇರದ ಕಾರಣಕ್ಕಾಗಿ ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ನಾಳೆ ಅಂದರೆ ಏಪ್ರಿಲ್‌ 7ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಲಿದ್ದು, ಸಾರಿಗೆ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇದರಿಂದ ಜನರು ಪರದಾಡುವ ಪರಿಸ್ಥಿತಿಯೂ ನಿರ್ಮಾಣವಾಗಲಿದೆ.

ಸರ್ಕಾರವು ಮುಷ್ಕರವನ್ನು ಹಿಂಪಡೆಯುವಂತೆ ಸಾರಿಗೆ ನೌಕರರಲ್ಲಿ ಮಾತುಕತೆ ನಡೆಸಿದರೂ ವಿಫಲವಾಗಿದ್ದು, ಇದರಿಂದ ಸರ್ಕಾರವು ನೌಕರರ ವಿರುದ್ದ ಸಿಟ್ಟಿಗೆದ್ದಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ ಅವರು, ಮುಷ್ಕರದಿಂದ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದಿದ್ದಾರೆ.

“ಖಾಸಗಿ ವಾಹನಗಳಿಗೆ ತಾತ್ಕಾಲಿಕವಾಗಿ ಪರವಾನಿಗೆ ಕೊಡಲಾಗುವುದು. ದೂರದ ಪ್ರಯಾಣಕ್ಕಾಗಿ ಬಂದಿರುವ ಪ್ರಯಾಣಿಕರಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲು ರೈಲ್ವೇ ಇಲಾಖೆಗೆ ಮನವಿ ಮಾಡಲಾಗಿದೆ,” ಎಂದು ಅವರು ಹೇಳಿದ್ದಾರೆ.

ಈಗ ರಾಜ್ಯದಲ್ಲಿ ಉಪಚುನಾವಣೆಗಳು ನಡೆಯುತ್ತಿರುವುದರಿಂದ, ಯಾವುದೇ ಮಹತ್ವದ ಘೋಷಣೆ ಮಾಡಲು ಸಾಧ್ಯವಿಲ್ಲ. ಸಾರಿಗೆ ನೌಕರರಿಗೆ 8% ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಈ ಕುರಿತಾಗಿ ಅನುಮತಿ ಕೋರಿ ಚುನಾವಣಾ ಆಯೋಗಕ್ಕೂ ಮನವಿ ಸಲ್ಲಿಸಲಾಗಿದೆ. ಜನರಿಗೆ ತೊಂದರೆ ಉಂಟಾಗದಂತೆ ಎಸ್ಮಾ ಜಾರಿಗೊಳಿಸುವುದು ಸೇರಿ ಎಲ್ಲಾ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸಿದ್ದವಿದೆ, ಎಂದು ಮಾಹಿತಿ ನೀಡಿದ್ದಾರೆ.

ಮುಷ್ಕರದ ಕುರಿತಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು, ಮೇ 4ರ ಬಳಿಕ ಸರ್ಕಾರ ಮಾತುಕತೆಗೆ ಸಿದ್ದವಿದೆ. ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಾರಿಗೆ ನೌಕರರು ಯಾವುದೇ ರಾಜಕೀಯ ಆಟದ ದಾಳವಾಗದೇ ಮುಷ್ಕರವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೂಡ ಪ್ರತಿಕ್ರಿಯಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಏಪ್ರಿಲ್‌ 7 ರಿಂದ ಸಂಸ್ಥೆ ಅನಿರ್ದಿಷ್ಟಾವಧಿಯ ಮುಷ್ಕರ ನಡೆಸಲಾಗುವುದು, ಜೊತೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜನರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಆಡಚಣೆಯಾಗದಂತೆ ನೋಡಿಕೊಳ್ಳುವ ಸಲುವಾಗಿ ಸಾರಿಗೆ ನೌಕರರಿಗೆ ಸಂಸ್ಥೆ ಕೆಲವು ನಿರ್ದೇಶನ ನೀಡಿದೆ.

Attachment
PDF
No work no pay (1).pdf
Preview

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com