ಸರ್ಕಾರದ ಸುಳ್ಳು ಆಶ್ವಾಸನೆ, ಮಾತು ತಪ್ಪಿರುವುದೇ ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣ -ಸಿದ್ದರಾಮಯ್ಯ

ಸಾರಿಗೆ ನೌಕರರ ಸಂಘದ ನಾಯಕರ ಜೊತೆ ಕೂತು ಅವರ ಮ‌ನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ‌‌ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
ಸರ್ಕಾರದ ಸುಳ್ಳು ಆಶ್ವಾಸನೆ, ಮಾತು ತಪ್ಪಿರುವುದೇ  ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣ -ಸಿದ್ದರಾಮಯ್ಯ

ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನಲೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕೆಂದು ಆಗ್ರಹಿಸಿದ್ದಾರೆ.

ಸರ್ಕಾರದ ಸುಳ್ಳು ಆಶ್ವಾಸನೆ, ಮಾತು ತಪ್ಪಿರುವುದೇ  ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣ -ಸಿದ್ದರಾಮಯ್ಯ
ಅಂತ್ಯಗೊಂಡ ಸಾರಿಗೆ ನೌಕರರ ಪ್ರತಿಭಟನೆ; ಬೇಡಿಕೆ ಪೂರೈಸಲು ಸರ್ಕಾರಕ್ಕೆ 3 ತಿಂಗಳ ಗಡುವು

ಕಳೆದ ಬಾರಿ ಕೆಎಸ್‌ಆರ್‌ಟಿಸಿ‌ ನೌಕರರ‌ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ‌ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ ಎಂದು ಕಿಡಿಕಾರಿದ್ದಾರೆ.

ಸರ್ಕಾರದ ಸುಳ್ಳು ಆಶ್ವಾಸನೆ, ಮಾತು ತಪ್ಪಿರುವುದೇ  ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣ -ಸಿದ್ದರಾಮಯ್ಯ
ಬುಧವಾರ ಸಾರಿಗೆ ನೌಕರರ ಮುಷ್ಕರ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕಾರ್ಮಿಕ‌ ಸಂಘದ ನಾಯಕರ ಜೊತೆ ಕೂತು ಅವರ ಮ‌ನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ‌‌ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.

ಸರ್ಕಾರದ ಸುಳ್ಳು ಆಶ್ವಾಸನೆ, ಮಾತು ತಪ್ಪಿರುವುದೇ  ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣ -ಸಿದ್ದರಾಮಯ್ಯ
ಸಾರಿಗೆ ನೌಕರರ ಮುಷ್ಕರ: ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳ ದರ್ಬಾರು: ಪ್ರಯಾಣಿಕರು ಕಂಗಾಲು

ಕರೋನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಂತರಿಕ ತಿಕ್ಕಾಟ,‌ ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿತಪ್ಪಿರುವ ರಾಜ್ಯದ ಬಿಜೆಪಿ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ. ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ‌ ಮತದಾರರು ನೀಡಲಿದ್ದಾರೆಂದಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com