ಧರಣಿ ನಿರತ ರೈತರನ್ನು ಸರ್ಕಾರ ಮಾತನಾಡಿಸದಿರುವುದು ರೈತರ ಸ್ವಾಭಿಮಾನಕ್ಕೆ ಆದ ಧಕ್ಕೆ –ಡಿಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಿಗೆ ಮತದಾನ ಹಕ್ಕು ನೀಡಲಾಗಿದೆ.ಅವರೆಲ್ಲರೂ ಒಂದೇ. ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಧರಣಿ ನಿರತ ರೈತರನ್ನು ಸರ್ಕಾರ ಮಾತನಾಡಿಸದಿರುವುದು 
ರೈತರ ಸ್ವಾಭಿಮಾನಕ್ಕೆ ಆದ ಧಕ್ಕೆ –ಡಿಕೆ ಶಿವಕುಮಾರ್

ರಾಜ್ಯದಲ್ಲಿ ಒಂದು ಲೋಕಸಭಾ, ಎರಡು ವಿಧಾನಸಭಾ ಉಪಚುನಾವಣೆ ಹಿನ್ನಲೆ, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್‌ ನಾಯಕ ಡಿಕೆ ಶಿವಕುಮಾರ್‌ ಭಾಗಿಯಾಗಿದ್ದು, ಚುನಾವಣಾ ಪ್ರಚಾರ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಚುನಾವಣೆ ಸಂಬಂಧ ನಮ್ಮ ನಾಯಕರ ಜತೆ ಚರ್ಚೆ ನಡೆಸುತ್ತಿದ್ದೇನೆ. ರೈತ ಮುಖಂಡರಾದ ಬಾಬಾಗೌಡ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಎಲ್ಲ ಕಮ್ಯುನಿಷ್ಟ್ ನಾಯಕರ ಜತೆ, ಚಾಲಕರ ಸಂಘ, ಆಟೋ ಚಾಲಕರು, ನೇಕಾರರನ್ನು ಭೇಟಿ ಮಾಡಲಿದ್ದೇನೆ. ಧರ್ಮಪೀಠಗಳಿಗೆ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದೇನೆ ಎಂದಿದ್ದಾರೆ. ಅವರೆಲ್ಲಾ ನಮ್ಮ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಬಗ್ಗೆ ಅನುಕಂಪ ಹೊಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಜೆಪಿ ಸರ್ಕಾರಕ್ಕೆ ಒಂದು ಸಂದೇಶವನ್ನೂ ಕಳುಹಿಸಬೇಕಿದೆ. ನೂರಾರು ದಿನದಿಂದ ರೈತರು ಧರಣಿ ಮಾಡುತ್ತಿದ್ದರೂ ಅವರನ್ನು ಮಾತನಾಡಿಸಿಲ್ಲ. ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೈತರಿದ್ದು, ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ತಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಮತದಾರರು ನಮಗೆ ಮತ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಗೆ ಎಲ್ಲ ಸಮುದಾಯದವರೂ ಒಂದೇ. ಲಿಂಗಾಯಿತರಾಗಿರಲಿ, ಮರಾಠರಾಗಿರಲಿ, ಪರಿಶಿಷ್ಟರಾಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ಅವರೆಲ್ಲರೂ ನಮ್ಮ ಅಣ್ಣ ತಮ್ಮಂದಿರು. ಬಿಜೆಪಿ ಮಾತ್ರ ಎಲ್ಲರನ್ನು ಬೇರೆ ಮಾಡಲು ಪ್ರಯತ್ನಿಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಿಗೆ ಮತದಾನ ಹಕ್ಕು ನೀಡಲಾಗಿದೆ.ಅವರೆಲ್ಲರೂ ಒಂದೇ. ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ನಾವು ನೌಕರರಿಗೆ ಬೆಂಬಲ ನೀಡುತ್ತೇವೆ. ಸರ್ಕಾರ ಅವರೊಂದಿಗೆ ಕೂತು, ಅವರ ನೋವು ಕೇಳಿ, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು. ಮುಷ್ಕರವನ್ನು ಹತ್ತಿಕುವ ಪ್ರಯತ್ನ ಮಾಡಬಾರದು. ಸರ್ಕಾರ ಅವರ ಮೇಲೆ ನಡೆಸುತ್ತಿರುವ ಧೋರಣೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com