ಅಕ್ರಮ ಹಣ ವರ್ಗಾವಣೆ ಆರೋಪದಡಿ ಚೀನಾದ ಸ್ಮಾರ್ಟ್ಫೋನ್ ತಯಾರಕ ವಿವೋ ವಿರುದ್ಧ ಜಾರಿ ನಿರ್ದೇಶನಾಲಯವು (ಇಡಿ) ಮಂಗಳವಾರ ಭಾರತದಾದ್ಯಂತ 44 ಸ್ಥಳಗಳಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಿಟಿಐ ವರದಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಶೋಧ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ ಮೂಲದ ವಿವೋ ವಿತರಕರ ವಿರುದ್ಧ ದೆಹಲಿ ಪೊಲೀಸ್ನ ಆರ್ಥಿಕ ಅಪರಾಧ ವಿಭಾಗದ FIR ಆಧಾರದ ಮೇಲೆ ಕೇಂದ್ರೀಯ ಸಂಸ್ಥೆ ಪ್ರಕರಣ ದಾಖಲಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಜಾರಿ ನಿರ್ದೇಶನಾಲಯದ ದಾಳಿ ಬಗ್ಗೆ ವಿವೋ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಉತ್ತರ ಪ್ರದೇಶ, ಬಿಹಾರ, ಮಧ್ಯ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 44 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ.
ಕಂಪನಿಯ ಕೆಲವು ಚೀನಾದ ಷೇರುದಾರರು ಶೆಲ್ ಅಥವಾ ಪೇಪರ್ ಕಂಪನಿಗಳನ್ನು ಬಳಸಿಕೊಂಡು ಅಕ್ರಮವಾಗಿ ಉತ್ಪಾದಿಸಿದ ಹಣವನ್ನು ಲಾಂಡರ್ ಮಾಡಲು ತಮ್ಮ ಗುರುತಿನ ದಾಖಲೆಗಳನ್ನು ನಕಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದಾಯದ ಕೆಲವು ಹಣವನ್ನು ವಿದೇಶಕ್ಕೆ ಕಳುಹಿಸುವ ಮೂಲಕ ಸರ್ಕಾರಕ್ಕೆ ಮೋಸ ವಂಚಿಸಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.